×
Ad

ಮಂಗಳೂರು : ಡಿ.27ರಂದು ಬಿಐಟಿ, ಸಹ ಸಂಸ್ಥೆಗಳ ಪದವಿ ಪ್ರದಾನ ಸಮಾರಂಭ

Update: 2020-12-25 23:48 IST

ಮಂಗಳೂರು : ಬ್ಯಾರೀಸ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಹಾಗೂ ಬ್ಯಾರೀಸ್ ಎನ್ವಿರೋ-ಆರ್ಕಿಟೆಕ್ಚರ್ ಡಿಸೈನ್ ಸ್ಕೂಲ್ (BEADS)ನ ಪದವಿ ಪ್ರದಾನ ಸಮಾರಂಭವು ಡಿ.27ರಂದು ಬೆಳಗ್ಗೆ 10 ಗಂಟೆಗೆ ಬ್ಯಾರೀಸ್ ಅರೆನಾ, ಬ್ಯಾರೀಸ್ ನಾಲೆಡ್ಜ್ ಕ್ಯಾಂಪಸ್, ಇನೋಳಿಯಲ್ಲಿ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ 2015ರ ಆರ್ಕಿಟೆಕ್ಚರ್ ಪದವೀಧರರು, 2016 ಮತ್ತು 2018 ರ ಬ್ಯಾಚ್ ನ ಇಂಜಿನಿಯರಿಂಗ್ ಪದವಿ ಮತ್ತು ಸ್ನಾತಕೋತ್ತರ ಪದವೀಧರರು, ಆರ್ಕಿಟೆಕ್ಚರ್, ಸಿವಿಲ್, ಮೆಕ್ಯಾನಿಕಲ್, ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್ ಹಾಗೂ ಕಂಪ್ಯೂಟರ್ ಸೈನ್ಸ್ ಬ್ಯಾಚ್ ನ ಶೈಕ್ಷಣಿಕ ವರ್ಷದ ಟಾಪರ್ ಮತ್ತು ಉತ್ತಮ ನಿರ್ಗಮನ ವಿದ್ಯಾರ್ಥಿ ಪುರಸ್ಕಾರವನ್ನು ನೀಡಲಾಗುವುದು. 2017ರ ಡಿಪ್ಲೋಮಾ, ಸಿವಿಲ್ ಹಾಗೂ ಮೆಕ್ಯಾನಿಕಲ್ ಬ್ಯಾಚ್ ನ ಯಶಸ್ವಿ ವಿದ್ಯಾರ್ಥಿಗಳನ್ನು ಕೂಡಾ ಕಾರ್ಯಕ್ರಮದಲ್ಲಿ ಪುರಸ್ಕರಿಸಲಾಗುವುದು ಎಂದು ಪ್ರಕಟನೆ ತಿಳಿಸಿದೆ.

ಮುಖ್ಯ ಅತಿಥಿಗಳಾಗಿ ಮಂಗಳೂರು ವಿಶ್ವವಿದ್ಯಾನಿಲಯ, ಜವಹರಲಾಲ್ ನೆಹರೂ ವಿಶ್ವವಿದ್ಯಾನಿಲಯ, ಎರ್ಫರ್ಟ್ ಯುನಿವರ್ಸಿಟಿ, ವ್ಯೂಝ್ ಬರ್ಗ್ ಯುನಿವರ್ಸಿಟಿ, ಸೈಮನ್ ಫ್ರೇಝರ್ ಯುನಿವರ್ಸಿಟಿ ಹಾಗೂ ಇನ್ನಿತರ ವಿಶ್ವವಿದ್ಯಾನಿಲಯಗಳಲ್ಲಿ ಸೇವೆ ಸಲ್ಲಿಸಿದ್ದ ಡಾ. ವಲೇರಿಯನ್ ಪಿಂಟೋ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 

ಮಣಿಪಾಲ್ ಸ್ಕೂಲ್ ಆಫ್ ಆರ್ಕಿಟೆಕ್ಚರ್ ಆ್ಯಂಡ್ ಪ್ಲಾನಿಂಗ್ ನ ನಿರ್ದೇಶಕಿ ಹಾಗೂ ಉಪನ್ಯಾಸಕಿ ಡಾ. ದೀಪಿಕಾ ಶೆಟ್ಟಿ, ಫೋರ್ಬ್ಸ್ ಇಂಡಿಯಾ ಮ್ಯಾಗಝಿನ್-2020ರ ಟಾಪ್ 100 ಅತ್ಯುತ್ತಮ ಮ್ಯಾನೇಜರ್ ಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದ ಲೋಧಾ ಗ್ರೂಪ್ ಮುಂಬೈನ ಉಪಾಧ್ಯಕ್ಷ ಗಣೇಶ್ ಪೂಜಾರಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಬ್ಯಾರೀಸ್ ಅಕಾಡಮಿ ಆಫ್ ಲರ್ನಿಂಗ್ಸ್ ಅಧ್ಯಕ್ಷ ಸೈಯದ್ ಮುಹಮ್ಮದ್ ಬ್ಯಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಯು.ಟಿ.ಖಾದರ್, ಬ್ಯಾರೀಸ್ ಗ್ರೂಪ್ ನ ಟ್ರಸ್ಟಿ ಮಝ್ಹರ್ ಬ್ಯಾರಿ, ಬಿಐಟಿಯ ಪ್ರಾಂಶುಪಾಲ ಡಾ. ಮಂಜುರ್ ಬಾಷಾ ಎಸ್.ಐ, ಬಿಐಟಿ ಪಾಲಿಟೆಕ್ನಿಕ್ ನ ನಿರ್ದೇಶಕ ಡಾ. ಅಝೀಝ್ ಮುಸ್ತಫಾ, ಬೀಡ್ಸ್  ಪ್ರಾಂಶುಪಾಲ ಎ.ಆರ್. ಅಶೋಕ್ ಎಲ್.ಪಿ ಮೆಂಡೋನ್ಸ ಹಾಗೂ ಇನ್ನಿತರ ವಿಭಾಗಗಳ ಮುಖ್ಯಸ್ಥರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪೋಷಕರು, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ ಭಾಗವಹಿಸಲಿದ್ದಾರೆ. ಕಾರ್ಯಕ್ರಮವು ಸುರಕ್ಷಿತವಾಗಿ ಕೋವಿಡ್ ನಿಯಮಗಳ ಪಾಲನೆಯೊಂದಿಗೆ ನಡೆಯಲಿದೆ ಎಂದು ಪ್ರಾಂಶುಪಾಲರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News