ಬಂಟಕಲ್: ರಾಷ್ಟ್ರೀಯ ಗಣಿತ ದಿನ ಆಚರಣೆ

Update: 2020-12-26 12:16 GMT

ಶಿರ್ವ, ಡಿ.26: ಬಂಟಕಲ್ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾ ಲಯದ ಗಣಿತಶಾಸ್ತ್ರ ವಿಭಾಗವು, ಕಾಲೇಜಿನ ಐಎಸ್‌ಟಿಇ ಘಟಕ ಮತ್ತು ಮಂಗಳೂರಿನ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ಸಹಯೋಗದೊಂದಿಗೆ ಶ್ರೇಷ್ಠ ಭಾರತೀಯ ಗಣಿತಶಾಸ್ತ್ರಜ್ಞ ಶ್ರೀನಿವಾಸ ರಾಮಾನುಜನ್ ಅವರ 133ನೇ ಜನ್ಮದಿನದ ನೆನಪಿಗಾಗಿ ರಾಷ್ಟ್ರೀಯ ಗಣಿತ ದಿನವನ್ನು ಡಿ.23ಂದು ಸಂಸ್ಥೆಯಲ್ಲಿ ಆಚರಿಸಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಪ್ರಾಂಶುಪಾಲ ಡಾ.ರಾಘವೇಂದ್ರ ಎ. ವಿಶೇಷ ಉಪನ್ಯಾಸ ನೀಡಿದರು. ಡೀನ್ ಡಾ.ವಾಸು ದೇವ, ‘ಅನಂತತೆಯನ್ನು ಬಲ್ಲ ವ್ಯಕ್ತಿ- ಶ್ರೀನಿವಾಸ ರಾಮಾನುಜನ್’ ಎಂಬ ವಿಷಯದ ಕುರಿತು ಮಾತನಾಡಿದರು.

ರಾಷ್ಟ್ರೀಯ ಗಣಿತ ದಿನದ ಅಂಗವಾಗಿ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರಿಗೆ ರಸಪ್ರಶ್ನೆ ಸ್ಪರ್ಧೆಯನ್ನು ನಡೆಸಲಾಯಿತು. ಸಂಸ್ಥೆಯ ಪ್ರಾಂಶು ಪಾಲ ಡಾ.ತಿರುಮಲೇಶ್ವರ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಗಣಿತ ವಿಭಾಗದ ಹಿರಿಯ ಸಹಾಯಕ ಪ್ರಾಧ್ಯಾಪಕಿ ರೆನಿಟಾ ಶರೋನ್ ಮೋನಿಶ್ ಕಾರ್ಯಕ್ರಮವನ್ನು ಸಂಯೋಜಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News