×
Ad

ಜಮ್ಮು-ಕಾಶ್ಮೀರದ ಶೋಪಿಯಾನ್‌ನಲ್ಲಿ ಭದ್ರತಾ ಪಡೆಗಳಿಂದ ಉಗ್ರನ ಹತ್ಯೆ

Update: 2020-12-26 21:29 IST

ಶ್ರೀನಗರ,ಡಿ.26: ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಕನಿಗಾಮ್ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಭದ್ರತಾ ಪಡೆಗಳೊಂದಿಗೆ ಗುಂಡಿನ ಕಾಳಗದಲ್ಲಿ ಅಪರಿಚಿತ ಉಗ್ರನೋರ್ವ ಕೊಲ್ಲಲ್ಪಟ್ಟಿದ್ದು, ಇದರೊಂದಿಗೆ ಈ ಕಾರ್ಯಾಚರಣೆಯಲ್ಲಿ ಹತ ಉಗ್ರರ ಸಂಖ್ಯೆ ಎರಡಕ್ಕೇರಿದೆ ಎಂದು ಪೊಲೀಸರು ಶನಿವಾರ ತಿಳಿಸಿದರು.

ಕನಿಗಾಮ್‌ನಲ್ಲಿ ಉಗ್ರರ ಇರುವಿಕೆಯ ಬಗ್ಗೆ ಮಾಹಿತಿ ಸಂಗ್ರಹಿಸಿದ್ದ ಭದ್ರತಾ ಪಡೆಗಳು ಶುಕ್ರವಾರ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದ್ದವು. ಈ ಸಂದರ್ಭ ಉಗ್ರರು ಅವರ ಮೇಲೆ ಗುಂಡು ಹಾರಿಸಿದ್ದು,ಪ್ರತಿಯಾಗಿ ಭದ್ರತಾ ಪಡೆಗಳೂ ಗುಂಡಿನ ದಾಳಿ ನಡೆಸಿದ್ದವು. ಗುಂಡಿನ ಕಾಳಗದಲ್ಲಿ ಇಬ್ಬರು ಯೋಧರೂ ಗಾಯಗೊಂಡಿದ್ದಾರೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News