ಐಸಿಸಿ ದಶಮಾನದ ಏಕದಿನ ಕ್ರಿಕೆಟ್ ತಂಡದಲ್ಲಿ ಧೋನಿ ನಾಯಕ: ಇನ್ನಿಬ್ಬರು ಭಾರತೀಯರಿಗೂ ಸ್ಥಾನ

Update: 2020-12-27 10:40 GMT

ಹೊಸದಿಲ್ಲಿ,ಡಿ.27: 2011ರ ವಿಶ್ವಕಪ್ ಗೆದ್ದ ಭಾರತ ತಂಡವನ್ನು ನಾಯಕನಾಗಿ ಮುನ್ನಡೆಸಿದ್ದ ಮಹೇಂದ್ರ ಸಿಂಗ್ ಧೋನಿ ಈ ಬಾರಿ ಐಸಿಸಿ ಪ್ರಕಟಿಸಿದ ದಶಮಾನದ ಏಕದಿನ ಕ್ರಿಕೆಟ್ ತಂಡದಲ್ಲಿ ನಾಯಕ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಐಸಿಸಿಯು ಪ್ರಕಟಿಸಿದ್ದ ದಶಮಾನದ ಟಿ-ಟ್ವೆಂಟಿ ತಂಡದಲ್ಲೂ ದೋನಿ ನಾಯಕನಾಗಿ ಆಯ್ಕೆಯಾಗಿದ್ದರು.

ಐಸಿಸಿ ದಶಮಾನದ ಏಕದಿನ ಕ್ರಿಕೆಟ್ ತಂಡದಲ್ಲಿ ಭಾರತ ತಂಡದ ಮೂವರು ಆಟಗಾರರು ಸ್ಥಾನ ಗಳಿಸಿದ್ದು, ಪಟ್ಟಿಯಲ್ಲಿ ಪ್ರಥಮ ಸ್ಥಾನವನ್ನು ಅಲಂಕರಿಸಿದ್ದಾರೆ. ಧೋನಿ ಜೊತೆಗೆ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಕೂಡಾ ಸ್ಥಾನ ಪಡೆದಿದ್ದಾರೆ.

ಭಾರತ ತಂಡದ ಮಹೇಂದ್ರ ಸಿಂಗ್ ಧೋನಿ, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ, ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಮತ್ತು ಮಿಚೆಲ್ ಸ್ಟಾರ್ಕ್, ದಕ್ಷಿಣ ಆಫ್ರಿಕಾದ ಎಬಿಡಿ ವಿಲಿಯರ್ಸ್ ಮತ್ತು ಇಮ್ರಾನ್ ತಾಹಿರ್, ಬಾಂಗ್ಲಾದೇಶ ತಂಡದ ಶಕೀಬ್ ಅಲ್ ಹಸನ್, ಇಂಗ್ಲೆಂಡ್ ನ ಬೆನ್ ಸ್ಟೋಕ್ಸ್ ಹಾಗೂ ಶ್ರೀಲಂಕಾ ತಂಡದ ಲಸಿತ್ ಮಾಲಿಂಗ ಸ್ಥಾನ ಪಡೆದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News