×
Ad

ಬಿ.ಎಲ್.ಸಂತೋಷ್ ಹೆಸರಿನಲ್ಲಿ ವಂಚನೆ: ಉತ್ತರ ಪ್ರದೇಶದ ಇಬ್ಬರ ಬಂಧನ

Update: 2020-12-27 18:40 IST

ಬೆಂಗಳೂರು, ಡಿ. 27: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೆಸರಲ್ಲಿ ನಕಲಿ ಫೇಸ್‍ಬುಕ್ ಖಾತೆ ಸೃಷ್ಟಿಸಿ ಜನರಿಂದ ಹಣ ಪಡೆದು ವಂಚಿಸುತ್ತಿದ್ದ ಆರೋಪದಡಿ ಇಬ್ಬರನ್ನು ಕೇಂದ್ರ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಚೌಕಿ ಬಂಗಾರ ಗ್ರಾಮದ ಇಬ್ರಾಹಿಂ ಹಾಗೂ ಶೋಕಿನ್ ಎಂಬವರು ಬಂಧಿತ ಆರೋಪಿಗಳಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಬಿ.ಎಲ್.ಸಂತೋಷ್ ಹೆಸರಿನಲ್ಲಿ ನಕಲಿ ಫೇಸ್‍ಬುಕ್ ಖಾತೆ ತೆರೆದು ಅವರ ಪರಿಚಿತರು, ಸ್ನೇಹಿತರಿಗೆ ಮೆಸೆಂಜರ್ ಮೂಲಕ ಸಂದೇಶ ಕಳಿಸಿ 15 ಸಾವಿರ ಹಣ ನೀಡುವಂತೆ ಬೇಡಿಕೆ ಇಡುತ್ತಿದ್ದರು, ಇದನ್ನು ನಂಬಿದ ಸಂತೋಷ್ ಅವರ ಸ್ನೇಹಿತರು, ಪರಿಚಿತರು ಅವರು ನೀಡಿದ ಖಾತೆಗೆ ಆನ್‍ಲೈನ್ ಮೂಲಕ ಹಣ ಸಂದಾಯ ಮಾಡುತ್ತಿದ್ದರು ಎನ್ನುವ ಮಾಹಿತಿ ಗೊತ್ತಾಗಿದೆ.

ಈ ಸಂಬಂಧ  ಸಂತೋಷ್ ಸಹ ತಮ್ಮ ಸಾಮಾಜಿಕ ತಾಣದಲ್ಲಿ ಎಚ್ಚರಿಕೆ ನೀಡಿ ನಗರ ಕೇಂದ್ರ ವಲಯದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದರು. ಈ ಕುರಿತು ಪ್ರಕರಣ ದಾಖಲಿಸಿದ ಕೇಂದ್ರ ವಿಭಾಗದ ಪೊಲೀಸರು, ಆರೋಪಿಗಳನ್ನು ಬಂಧಿಸಿ, ಐದು ಮೊಬೈಲ್, ಹತ್ತಕ್ಕೆ ಹೆಚ್ಚು ಸಿಮ್ ಕಾರ್ಡ್, ಬ್ಯಾಂಕ್ ಪಾಸ್‍ಬುಕ್ ಗಳನ್ನು ಜಪ್ತಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News