×
Ad

ಉ.ಪ್ರ: 17ರ ಹರೆಯದ ದಲಿತ ಬಾಲಕಿಯ ಅತ್ಯಾಚಾರ; ಆರೋಪಿಯ ಬಂಧನ

Update: 2020-12-27 22:03 IST

ಶಾಹಜಹಾನ್‌ಪುರ, ಡಿ.27: ಶಾಹಜಹಾನ್‌ಪುರದ ಜಲಾಲಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮದಲ್ಲಿ 17ರ ಹರೆಯದ ದಲಿತ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

25ರ ಹರೆಯದ ಆರೋಪಿಯು ಸಂತ್ರಸ್ತ ಬಾಲಕಿಯ ಗ್ರಾಮದವನೇ ಆಗಿದ್ದು,ಶನಿವಾರ ಕಬ್ಬಿನ ಗದ್ದೆಯೊಂದರಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದರು.

ಘಟನೆಯ ಬಳಿಕ ಅಲ್ಲಿಂದ ತಪ್ಪಿಸಿಕೊಂಡಿದ್ದ ಬಾಲಕಿಯು ಈ ಬಗ್ಗೆ ಮನೆಯವರಿಗೆ ತಿಳಿಸಿದ್ದು,ಅವರು ಪೊಲೀಸ್ ದೂರನ್ನು ದಾಖಲಿಸಿದ್ದರು.

ಶನಿವಾರ ರಾತ್ರಿಯೇ ಆರೋಪಿಯನ್ನು ಬಂಧಿಸಲಾಗಿದ್ದು, ಬಾಲಕಿಯನ್ನು ವೈದ್ಯಕೀಯ ತಪಾಸಣೆಗೊಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News