ಜನವರಿ ಮೊದಲ ವಾರದಲ್ಲಿ ಸುಪ್ರೀಂನಲ್ಲಿ ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ

Update: 2020-12-27 18:06 GMT

ಬೆಂಗಳೂರು, ಡಿ.27: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ ಸ್ಯಾಂಡಲ್‍ವುಡ್ ನಟಿ ರಾಗಿಣಿ ದ್ವಿವೇದಿ ಜಾಮೀನು ಕೋರಿ ಸುಪ್ರೀಂಕೋರ್ಟ್‍ಗೆ ಸಲ್ಲಿಸಿರುವ ಅರ್ಜಿ ಜನವರಿ ಮೊದಲ ವಾರದಲ್ಲಿ ವಿಚಾರಣೆಗೆ ಬರಲಿದೆ.

ಇದರಿಂದ, ಸ್ಯಾಂಡಲ್‍ವುಡ್ ನಟಿ ರಾಗಿಣಿ ದ್ವಿವೇದಿಗೆ ಜನವರಿವರೆಗೂ ಬಿಡುಗಡೆ ಭಾಗ್ಯ ಇಲ್ಲದಂತಾಗಿದೆ. ಸುಪ್ರೀಂಕೋರ್ಟ್‍ನಲ್ಲಿ ನಟಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ, ಜನವರಿ ಮೊದಲ ವಾರಕ್ಕೆ ಮುಂದೂಡಿದೆ. ಈ ಮೂಲಕ ಪರಪ್ಪನ ಅಗ್ರಹಾರ ಜೈಲಿನಲ್ಲೇ ರಾಗಿಣಿ ಹೊಸ ವರ್ಷ ಆಚರಿಸುವುದು ಅನಿವಾರ್ಯವಾಗಿದೆ.

ಕಳೆದ ಮೂರು ತಿಂಗಳಿನಿಂದ ರಾಗಿಣಿ ಜೈಲುವಾಸ ಅನುಭವಿಸುತ್ತಿದ್ದಾರೆ. ಕರ್ನಾಟಕ ಹೈಕೋರ್ಟ್‍ನಲ್ಲಿ ಜಾಮೀನು ಸಿಗದ ಕಾರಣ ಅವರು ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಅಲ್ಲಿಯೂ ಅವರಿಗೆ ನಿರಾಸೆಯಾಗಿದೆ. ಡ್ರಗ್ಸ್ ಜಾಲದ ನಂಟು ಆರೋಪದ ಮೇರೆಗೆ ಸಿಸಿಬಿ ಅಧಿಕಾರಿಗಳು ಸೆ.4ರಂದು ಅವರ ಮನೆ ಮೇಲೆ ದಾಳಿ ನಡೆಸಿ, ವಶಕ್ಕೆ ಪಡೆದುಕೊಂಡಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News