ವಿಷ್ಣುವರ್ಧನ್ ಪುತ್ಥಳಿ ಧ್ವಂಸ ಪ್ರಕರಣ: ತನಿಖೆ ಚುರುಕು
Update: 2020-12-27 23:45 IST
ಬೆಂಗಳೂರು, ಡಿ. 27: ಕನ್ನಡ ಚಿತ್ರರಂಗದ ಹಿರಿಯ ನಟ ದಿವಂಗತ ಡಾ.ವಿಷ್ಣುವರ್ಧನ್ ಪುತ್ಥಳಿ ಧ್ವಂಸ ಕೃತ್ಯಕ್ಕೆ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆಯನ್ನು ಚುರುಕುಗೊಳಿಸಿದ್ದಾರೆ.
ಕೃತ್ಯವೆಸಗಿದ ಕಿಡಿಗೇಡಿಗಳ ವಿರುದ್ಧ ಸೆಕ್ಷನ್ 427 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ವಿಜಯನಗರ ಠಾಣಾ ಪೊಲೀಸರು ಘಟನಾ ಸ್ಥಳದ ಸಿಸಿಟಿವಿ ಪರಿಶೀಲನೆ ನಡೆಸಿ ಘಟನಾ ಸ್ಥಳದಲ್ಲಿ ಓಡಾಡಿದ್ದವರ ಮಾಹಿತಿ ಸಂಗ್ರಹಿಸಿ ಕೃತ್ಯ ನಡೆಸಿದವರ ಪತ್ತೆಗೆ ಶೋಧ ನಡೆಸಿದ್ದಾರೆ.
ಮಾಗಡಿ ರಸ್ತೆಯಲ್ಲಿರುವ ವಿಷ್ಣು ವರ್ಧನ್ ಪುತ್ಥಳಿಯನ್ನು ಕಿಡಿಗೇಡಿ ಗಳು ಕಳೆದ ಡಿ.25ರ ರಾತ್ರಿ ಧ್ವಂಸ ಮಾಡಿದ್ದರು.ಕೃತ್ಯ ಬಯಲಾಗುತ್ತಿದ್ದಂತೆ ಸ್ಥಳದಲ್ಲಿ ವಿಷ್ಣುವರ್ಧನ್ ಅಭಿಮಾನಿಗಳು ಜಮಾಯಿಸಿ ಖಂಡನೆ ವ್ಯಕ್ತಪಡಿಸಿ ರಾಜ್ಯದೆಲ್ಲೆಡೆ ವಿಷ್ಣು ಅಭಿಮಾನಿಗಳು ಬೀದಿಗಿಳಿದು ಪ್ರತಿಭಟನೆ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದರು.