ಕಸ್ತೂರಿ ರಂಗನ್ ವರದಿ: ಮಹತ್ವದ ನಿರ್ಧಾರ ಕೈಗೊಂಡ ರಾಜ್ಯ ಸರಕಾರ

Update: 2020-12-28 16:32 GMT

ಬೆಂಗಳೂರು, ಡಿ.28: ಪಶ್ಚಿಮ ಘಟ್ಟಗಳನ್ನು ಸಂರಕ್ಷಿತ ವಲಯವಾಗಿಸುವ ಕುರಿತಂತೆ ಕಸ್ತೂರಿ ರಂಗನ್ ವರದಿ ಜಾರಿಯನ್ನು ವಿರೋಧಿಸುವಂತಹ ಮಹತ್ವದ ತೀರ್ಮಾನಕ್ಕೆ ಬರಲಾಗಿದ್ದು, ಈ ಮೂಲಕ ರಾಜ್ಯ ಸರಕಾರ ಕಸ್ತೂರಿ ರಂಗನ್ ವರದಿ ಜಾರಿಯ ಕುರಿತಂತೆ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.

ಸೋಮವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್ ಅವರು, ಕಸ್ತೂರಿ ರಂಗನ್ ವರದಿ ವಿರೋಧಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಈ ಬಗ್ಗೆ ಸಂಪುಟ ಉಪಸಮಿತಿ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ವರದಿ ವಿರೋಧಿಸಿ ಕೇಂದ್ರ ಸರಕಾರಕ್ಕೆ ಪತ್ರ ಬರೆಯಲಾಗುತ್ತದೆ. ಪತ್ರ ಬರೆಯಲು ಸಂಪುಟ ಉಪಸಮಿತಿ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ತಿಳಿಸಿದರು.

ಡಿ.31ರಂದು ಎನ್‍ಜಿಟಿಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತಂತೆ ವಿಚಾರಣೆ ಇದೆ. ಅಂದು ರಾಜ್ಯ ಸರಕಾರದಿಂದ ಕಸ್ತೂರಿ ರಂಗನ್ ವರದಿ ಜಾರಿ ಸಾಧ್ಯವಿಲ್ಲ ಎಂಬುದಾಗಿ ತಿಳಿಸಲಾಗುತ್ತದೆ. ಕೇಂದ್ರಕ್ಕೆ ರಾಜ್ಯದ ಜನರ ಭಾವನೆ ತಿಳಿಸುತ್ತೇವೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News