ಡಿ.31ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

Update: 2020-12-28 17:07 GMT

ಬೆಂಗಳೂರು, ಡಿ.28: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಡಿ.31ರಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರಿನಲ್ಲಿ ಡಿ.31ರಂದು ಸಾಧಾರಣ ಮಳೆಯಾಗಲಿದೆ.

2.5 ಮಿ.ಮೀನಿಂದ 64.4 ಮಿ.ಮೀವರೆಗೆ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಆಕಾಶ ಶುಭ್ರವಾಗಿದೆ. 29 ಡಿಗ್ರಿ ಗರಿಷ್ಠ ಉಷ್ಣಾಂಶ, 15 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದೆಲ್ಲೆಡೆ ಉಣಹವೆ ಮುಂದುವರಿಯಲಿದೆ. ಬೀದರ್ ನಲ್ಲಿ 9.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News