×
Ad

ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್ ಗೆ ಸಚಿವ ಸಂಪುಟ ಸಹೋದ್ಯೋಗಿಗಳಿಂದ ಸನ್ಮಾನ

Update: 2020-12-28 23:30 IST

ಬೆಂಗಳೂರು, ಡಿ. 28: ಡಿಸೆಂಬರ್ ಅಂತ್ಯಕ್ಕೆ ನಿವೃತ್ತಿ ಹೊಂದಲಿರುವ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರನ್ನು ಸಚಿವ ಸಂಪುಟ ಸಭೆಗೆ ಮುನ್ನ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಸಚಿವ ಸಂಪುಟ ಸಹೋದ್ಯೋಗಿಗಳು ಸನ್ಮಾನಿಸಿದರು.

ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಏರ್ಪಡಿಸಿದ್ದ ಸರಳ ಸಮಾರಂಭದಲ್ಲಿ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರಿಗೆ ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ, ಗಂಧದ ಹಾರವನ್ನು ಹಾಕಿ, ಪುಷ್ಪಗುಚ್ಛ ನೀಡಿ ಸನ್ಮಾನಿಸಿದರು. ಇದೇ ತಿಂಗಳ 31ಕ್ಕೆ ವಿಜಯಭಾಸ್ಕರ್ ಅವರು ನಿವೃತ್ತಿ ಹೊಂದಲಿದ್ದಾರೆ.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಡಾ.ಅಶ್ವತ್ಥ ನಾರಾಯಣ, ಸಚಿವರಾದ ಜಗದೀಶ್ ಶೆಟ್ಟರ್, ಆನಂದ್ ಸಿಂಗ್, ಕೆ.ಗೋಪಾಲಯ್ಯ, ಬಿ.ಸಿ.ಪಾಟೀಲ್, ಎಸ್.ಟಿ.ಸೋಮಶೇಖರ್, ನಾಗೇಶ್, ಪ್ರಭು ಚೌಹಾಣ್, ಆರ್.ಅಶೋಕ್, ಸಿ.ಸಿ.ಪಾಟೀಲ್, ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ಇನ್ನಿತರರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News