×
Ad

ಉತ್ತರ ಪ್ರದೇಶ: ಪತ್ರಿಕಾಗೋಷ್ಠಿ ನಡೆಸಿದ್ದಕ್ಕೆ ಎಐಎಂಐಎಂ ರಾಜ್ಯಾಧ್ಯಕ್ಷನ ವಿರುದ್ಧ ಎಫ್‌ಐಆರ್

Update: 2020-12-29 14:44 IST

ಲಕ್ನೊ: ಬಲರಾಂಪುರದಲ್ಲಿ ರವಿವಾರ ಪತ್ರಿಕಾಗೋಷ್ಟಿಯನ್ನು ನಡೆಸಿದ್ದಕ್ಕೆ ಎಐಎಂಐಎಂ ರಾಜ್ಯಾಧ್ಯಕ್ಷ ಶೌಕತ್ ಅಲಿ ಸೇರಿದಂತೆ ಸುಮಾರು ಅರ್ಧಡಜನ್ ಸದಸ್ಯರುಗಳ ವಿರುದ್ದ ಎಫ್‌ಐಆರ್ ದಾಖಲಿಸಲಾಗಿದೆ.

ಪತ್ರಿಕಾಗೋಷ್ಟಿಯನ್ನು ನಡೆಸಲು ಎಐಎಂಐಎಂ ಪಕ್ಷ ಅನುಮತಿ ಪಡೆಯದೇ ಇರುವುದಕ್ಕೆ ಎಫ್‌ಐಆರ್ ದಾಖಲಿಸಲಾಗಿದೆ. ಪತ್ರಿಕಾಗೋಷ್ಟಿಯಲ್ಲಿದ್ದವರು ಕೋವಿಡ್ ಶಿಷ್ಟಾಚಾರವನ್ನು ಪಾಲಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಐಪಿಸಿ ಸೆಕ್ಷನ್ 188(ಸಾರ್ವಜನಿಕ ಸೇವಕರಿಂದ ಘೋಷಿಸಲ್ಪಟ್ಟ ಆದೇಶಕ್ಕೆ ಅಸಹಕಾರ) ಹಾಗೂ ಸಾಂಕ್ರಾಮಿಕ ರೋಗಗಳ ಕಾಯ್ದೆ ಅನ್ವಯ ಎಫ್‌ಐಆರ್ ದಾಖಲಿಸಲಾಗಿದೆ.

ಎಐಎಂಐಎಂ ಅಭ್ಯರ್ಥಿ ತಾಜ್ ಹೊಟೇಲ್‌ನಲ್ಲಿ ಪತ್ರಿಕಾಗೋಷ್ಟಿಯನ್ನು ನಡೆಸಿದ್ದರೆಂಬ ಮಾಹಿತಿ ನಮಗೆ ಲಭಿಸಿತ್ತು. ಅಲ್ಲಿ ಸಾಕಷ್ಟು ಜನರು ಸೇರಿದ್ದರು. ಸ್ಥಳೀಯ ಪೊಲೀಸ್ ಠಾಣೆಯ ಮೇಲ್ವಿಚಾರಕರು ಸ್ಥಳಕ್ಕೆ ತಲುಪಿದ್ದರು. ಆಗ ದೊಡ್ಡ ಸಂಖ್ಯೆಯ ಜನರು ಸೇರಿದ್ದರು. ಯಾರೂ ಕೋವಿಡ್ ಶಿಷ್ಟಾಚಾರವನ್ನು ಪಾಲಿಸಿರಲಿಲ್ಲ ಎಂದು ಸರ್ಕಲ್ ಆಫೀಸರ್ ರಾಧಾರಮಣ್ ಸಿಂಗ್ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News