×
Ad

ವಿಶ್ವ ಮಾನವ ದಿನಾಚರಣೆ

Update: 2020-12-29 19:26 IST

ಉಡುಪಿ, ಡಿ.29: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ನಡೆದ ವಿಶ್ವ ಮಾನವ ದಿನಾಚರಣೆ ಯನ್ನು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಕುವೆಂಪು ಅವರ ಬಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತುತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News