×
Ad

ಗ್ರಾ.ಪಂ. ಚುನಾವಣೆ: ಜೈಲಿನಿಂದಲೇ ನಾಮಪತ್ರ ಸಲ್ಲಿಸಿದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಗೆಲುವು

Update: 2020-12-30 13:17 IST

ಮಡಿಕೇರಿ, ಡಿ.30: ಪಾಲಿಬೆಟ್ಟ ಗ್ರಾಮ ಪಂಚಾಯತ್ ನ ಎಮ್ಮೆಗುಂಡಿ ಕ್ಷೇತ್ರದ ಅಭ್ಯರ್ಥಿಯಾಗಿ ಜೈಲಿನಿಂದಲೇ ನಾಮಪತ್ರ ಸಲ್ಲಿಸಿದ್ದ ಪುಲಿಯಂಡ ಬೋಪಣ್ಣ ಅವರು ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಯುಸೂಫ್ ವಿರುದ್ಧ 61 ಮತಗಳ ಅಂತರದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಬೋಪಣ್ಣ ಜಯ ಗಳಿಸಿದ್ದಾರೆ.

ಬೋಪಣ್ಣ ಅವರು ಜಾತಿ ನಿಂದನೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದರು. ಖುದ್ದು ನಾಮಪತ್ರ ಸಲ್ಲಿಸಲು ಅವಕಾಶ ಆಗಿರಲಿಲ್ಲ. ಹೀಗಾಗಿ ತಮ್ಮ ಬೆಂಬಲಿಗರೊಬ್ಬರು ನಾಮಪತ್ರ ಸಲ್ಲಿಸಿದ್ದರು. ಬಳಿಕ ಜಾಮೀನು ಲಭಿಸಿದ್ದರಿಂದ ಎರಡು ದಿನ ಚುನಾವಣಾ ಪ್ರಚಾರ ನಡೆಸಿದ್ದರು.

ಈ ಹಿಂದೆ ಅವರು 12 ವರ್ಷ ಪಾಲಿಬೆಟ್ಟ ಪಂಚಾಯತ್ ಅಧ್ಯಕ್ಷರಾಗಿದ್ದರು. ಇವರ ಅವಧಿಯಲ್ಲಿ ಗ್ರಾಮ‌ ಪಂಚಾಯತ್ ಗೆ ರಾಷ್ಟ್ರೀಯ ‌ಪುರಸ್ಕಾರವೂ ಲಭಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News