ಗ್ರಾ.ಪಂ. ಚುನಾವಣೆ: ಪಕ್ಷವಾರು ಫಲಿತಾಂಶ ಪ್ರಸಾರ ಮಾಡದಂತೆ ಚುನಾವಣಾ ಆಯೋಗ ಸೂಚನೆ

Update: 2020-12-30 11:44 GMT

ಬೆಂಗಳೂರು, ಡಿ. 30: ರಾಜ್ಯದಲ್ಲಿ ಗ್ರಾಮ ಪಂಚಾಯತ್ ಚುನಾವಣೆ ಪಕ್ಷ ರಹಿತ ಚುನಾವಣೆಯಾಗಿರುತ್ತದೆ. ಆದುದರಿಂದ ಯಾವುದೇ ಆಧಾರವಿಲ್ಲದೆ ಪಕ್ಷವಾರು ಫಲಿತಾಂಶ ಎಂಬಂತೆ ಸುದ್ದಿ ಮಾಧ್ಯಮಗಳು ಪ್ರಸಾರ ಮಾಡಬಾರದು ಎಂದು ರಾಜ್ಯ ಚುನಾವಣಾ ಆಯೋಗ ಸೂಚನೆ ನೀಡಿದೆ.

ಗ್ರಾ.ಪಂ. ಚುನಾವಣೆಯು ಪಕ್ಷರಹಿತ ಚುನಾವಣೆಯಾಗಿರುತ್ತದೆ. ಆದರೆ, ಕೆಲ ಖಾಸಗಿ ಸುದ್ದಿವಾಹಿನಿಗಳಲ್ಲಿ ಈ ಚುನಾವಣೆಯ ಫಲಿತಾಂಶಗಳನ್ನು ರಾಜಕೀಯ ಪಕ್ಷಗಳ ಆಧಾರಿತ ಚುನಾವಣೆಯಂತೆ ಪ್ರಸಾರ ಮಾಡಲಾಗುತ್ತಿರುವುದರಿಂದ ಸಾರ್ವಜನಿಕರಿಗೆ ತಪ್ಪು ಮಾಹಿತಿಯನ್ನು ನೀಡಿದಂತಾಗುತ್ತದೆ ಎಂದು ಆಯೋಗದ ಅಧೀನ ಕಾರ್ಯದರ್ಶಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News