×
Ad

ವಿದೇಶದಿಂದ ಬಂದವರು ಕೋವಿಡ್ ಪರೀಕ್ಷೆ ಮಾಡಿಸಲು ಸಿಎಂ ಯಡಿಯೂರಪ್ಪ ಮನವಿ

Update: 2020-12-30 17:44 IST

ಬೆಂಗಳೂರು, ಡಿ.30: ಕಳೆದ ಎರಡು ತಿಂಗಳಿಂದ ಬ್ರಿಟನ್ ಸೇರಿ ವಿದೇಶದಿಂದ ಆಗಮಿಸಿರುವವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು. ಕೇಂದ್ರ ಸರಕಾರದ ಮಾರ್ಗಸೂಚಿಯನ್ನು ಯಥಾವತ್ತು ಜಾರಿಗೊಳಿಸಲಾಗುವುದು. ಅಗತ್ಯ ಬಿದ್ದರೆ ಮಾತ್ರ ಮಾರ್ಗಸೂಚಿ ಬದಲಾವಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದೇಶದಿಂದ ಬಂದಿರುವ ಕೆಲವರು ತಪ್ಪಿಸಿಕೊಂಡು ಓಡಾಡುತ್ತಿದ್ದಾರೆ. ಕೂಡಲೇ ಇಂತಹವರು ಕೋವಿಡ್ ಪರೀಕ್ಷೆಗೆ ಒಳಗಾಗಬೇಕು. ಜನರು ಸರಕಾರದ ಜತೆ ಸಹಕರಿಸಬೇಕು. ಕೊರೋನ ಅಪಾಯ ಇನ್ನೂ ತಗ್ಗಿಲ್ಲ. ಹೊಸ ವರ್ಷಕ್ಕೆ ಕಾಲಿಡುತ್ತಿರುವ ಈ ಹೊತ್ತಿನಲ್ಲಿ ಸಾಂಕ್ರಾಮಿಕದ ಬಗ್ಗೆ ಕಿಂಚಿತ್ತೂ ನಿರ್ಲಕ್ಷ್ಯ ವಹಿಸುವುದು ಬೇಡ. ಸರಕಾರದ ಮಾರ್ಗಸೂಚಿ ನಿಯಮಗಳನ್ನು ಪಾಲಿಸಿ, ಎಲ್ಲ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಸಹಕರಿಸಿ, ಸುರಕ್ಷಿತವಾಗಿರಿ ಎಂದು ಕೋರಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News