ಕೇಂದ್ರ ಸರಕಾರದ ಕೃಷಿ ಕಾನೂನುಗಳ ವಿರುದ್ಧ ನಿರ್ಣಯ ಮಂಡಿಸಿದ ಕೇರಳ

Update: 2020-12-31 05:55 GMT

ತಿರುವನಂತಪುರ: ಕಳೆದ ಒಂದು ತಿಂಗಳುಗಳಿಂದ ದಿಲ್ಲಿಯ ಗಡಿಭಾಗದಲ್ಲಿ ರೈತರ ತೀವ್ರ ಪ್ರತಿಭಟನೆಗೆ ಕಾರಣವಾಗಿರುವ ಕೇಂದ್ರ ಸರಕಾರ ಜಾರಿಗೆ ತಂದಿರುವ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ರಾಜ್ಯ ವಿಧಾನಸಭೆಯಲ್ಲಿ ಗುರುವಾರ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನಿರ್ಣಯ ಮಂಡಿಸಿದರು.

ರೈತರ ಸಮಸ್ಯೆಗಳನ್ನು ಚರ್ಚಿಸಲು ಹಾಗೂ ಅವರಿಗೆ ಬೆಂಬಲ ವ್ಯಕ್ತಪಡಿಸುವ ಸಲುವಾಗಿ ಇಂದು ವಿಶೇಷ ಅಧಿವೇಶನ ಕರೆಯಲಾಗಿದ್ದು, ಈ ವೇಳೆ ಈ ನಿರ್ಣಯ ಅಂಗೀಕರಿಸಲಾಯಿತು.

ನಿರ್ಣಯವನ್ನು ಮಂಡಿಸಿರುವ ವಿಜಯನ್ ತಕ್ಷಣವೇ ಹೊಸ ಕಾನೂನುಗಳನ್ನು ರದ್ದುಪಡಿಸುವಂತೆ ಆಗ್ರಹಿಸಿದರು.

ದೇಶವೀಗ ರೈತರ ಪ್ರಮುಖ ಪ್ರತಿಭಟನೆಯೊಂದಕ್ಕೆ ಸಾಕ್ಷಿಯಾಗಿದೆ. ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟಿರುವ ಕೃಷಿಕಾಯ್ದೆಗಳು ಕೇವಲ ರೈತರ ವಿರೋಧಿ ಮಾತ್ರವಲ್ಲ, ಕಾರ್ಪೋರೇಟ್‌ಗಳ ಪರವಾಗಿದೆ. ಈ ತನಕ ಪ್ರತಿಭಟನೆಯ ವೇಳೆ ಕನಿಷ್ಠ 32 ರೈತರು ಸಾವನ್ನಪ್ಪಿದ್ದಾರೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News