×
Ad

ಶಿವಮೊಗ್ಗ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕನ ಮನೆ, ಕಚೇರಿಗೆ ಎಸಿಬಿ ದಾಳಿ

Update: 2020-12-31 13:50 IST

ಶಿವಮೊಗ್ಗ : ಆದಾಯಕ್ಕೂ ಮೀರಿ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಅಧಿಕಾರಿಯೊಬ್ಬರ ಮನೆ, ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಜಿ.ಜಿ. ಸುರೇಶ್ ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ. ಶಿವಮೊಗ್ಗದ ಮಲ್ಲೇಶ್ವರ ನಗರದಲ್ಲಿರುವ ಸುರೇಶ್ ಅವರ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಎಸಿಬಿ ಅಧಿಕಾರಿಗಳು ಮಲ್ಲೇಶ್ವರ ನಗರದಲ್ಲಿ ಇರುವ ಮನೆ, ಗೋಪಾಲಗೌಡ ಬಡಾವಣೆಯಲ್ಲಿರುವ ಮನೆ, ಭದ್ರಾವತಿ ಹುಣಸೇಕಟ್ಟೆಯಲ್ಲಿರುವ ತೋಟ ಮತ್ತು ತೋಟದ ಮನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿಯಲ್ಲಿ ತಪಾಸಣೆ ನಡೆಸಿದ್ದಾರೆ.

ಜಿ.ಜಿ.ಸುರೇಶ್ ಅವರ ಮನೆಯಲ್ಲಿರುವ ದಾಖಲೆಗಳು, ಚಿನ್ನಾಭರಣದ ದಾಖಲೆಗಳ ಪರಿಶೀಲನೆ ನಡೆಯುತ್ತಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಿದೆ.

ಭ್ರಷ್ಟಾಚಾರ ನಿಗ್ರಹದಳದ ಪೂರ್ವ ವಲಯ ಎಸ್‌.ಪಿ. ಜಯಪ್ರಕಾಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಶಿವಮೊಗ್ಗ ಎಸಿಬಿ ಡಿಎಸ್‌ಪಿ ಲೋಕೇಶ್, ದಾವಣಗೆರೆ ಡಿಎಸ್‌ಪಿ ಪರಮೇಶ್ವರ್, ಇನ್ಸ್‌ಪೆಕ್ಟರ್ ವೀರೇಂದ್ರ ನೇತೃತ್ವದ ತಂಡ ದಾಳಿ ನಡೆಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News