​ದ.ಕ.ಜಿಲ್ಲೆಯಲ್ಲಿ ಗುರುವಾರ 35 ಮಂದಿಗೆ ಕೊರೋನ ಪಾಸಿಟಿವ್

Update: 2020-12-31 17:08 GMT

ಮಂಗಳೂರು, ಡಿ.31: ದ.ಕ.ಜಿಲ್ಲೆಯಲ್ಲಿ ಗುರುವಾರ 35 ಮಂದಿಯಲ್ಲಿ ಕೊರೋನ ಪಾಸಿಟಿವ್ ಧೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 32,884 ಪಾಸಿಟಿವ್ ಪ್ರಕರಣಗಳು ಕಂಡು ಬಂದಿದೆ.

ಗುರುವಾರ 32 ಮಂದಿ ಗುಣಮುಖರಾಗಿದ್ದು, ಇದರೊಂದಿಗೆ ಈವರೆಗೆ 31,784 ಮಂದಿಗೆ ನೀಡಿದ ಚಿಕಿತ್ಸೆ ಫಲಕಾರಿಯಾಗಿದೆ.
ಜಿಲ್ಲೆಯಲ್ಲಿ ಈವರೆಗೆ 4,74,681 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿತ್ತು. ಆ ಪೈಕಿ 4,41,797 ಮಂದಿಯ ವರದಿ ನೆಗೆಟಿವ್ ಮತ್ತು 32,884 ಮಂದಿಯ ವರದಿ ಪಾಸಿಟಿವ್ ಆಗಿದೆ. ಅಲ್ಲದೆ 368 ಸಕ್ರಿಯ ಪ್ರಕರಣವಿದೆ. ಈವರೆಗೆ ಕೊರೋನ ಸೋಂಕಿಗೆ ಜಿಲ್ಲೆಯಲ್ಲಿ 732 ಮಂದಿ ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ 18,777 ಮಂದಿಯ ವಿರುದ್ಧ ಮಾಸ್ಕ್ ಉಲ್ಲಂಘಿಸಿದ ಪ್ರಕರಣ ದಾಖಲಿಸಲಾಗಿದ್ದು, 19,97,978 ರೂ. ದಂಡವನ್ನು ವಸೂಲಿ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News