ಸಮುದ್ರ ಪ್ರಕ್ಷುಬ್ಧ: ಮೀನುಗಾರರಿಗೆ ಎಚ್ಚರಿಕೆ

Update: 2020-12-31 17:14 GMT

ಉಡುಪಿ, ಡಿ.31: ಕರ್ನಾಟಕ ಕರಾವಳಿಯ ಸಮುದ್ರ ತೀರ ಪ್ರದೇಶಗಳಲ್ಲಿ ಸಮುದ್ರ ಪ್ರಕ್ಷುಬ್ಧವಾಗಿದ್ದು, ದೊಡ್ಡ ದೊಡ್ಡ ಅಲೆಗಳು ತೀರವನ್ನು ಅಪ್ಪಳಿಸುವ ಸಾಧ್ಯತೆ ಇದ್ದು, ಇದರಿಂದ ತೀರದ ತಗ್ಗು ಪ್ರದೇಶಗಳಿಗೆ (ಉಡುಪಿ, ಮುರ್ಡೇಶ್ವರ, ಗೋಕರ್ಣ ಹಾಗೂ ಮಹೀಮ್) ನೀರು ನುಗ್ಗುವ ಸಾಧ್ಯತೆ ಇದೆ.

ಇದೇ ಸ್ಥಿತಿ ಜ.1ರ ರಾತ್ರಿ 11:30ರವರೆಗೆ ಮುಂದುವರಿಯುವ ಸಾಧ್ಯತೆ ಇದೆ. ಈ ಅವಧಿಯಲ್ಲಿ 1.2ರಿಂದ 1.7ಮೀ. ಅಲೆಗಳು ಏಳುವ ಸಾಧ್ಯತೆ ಇದ್ದು, ಈ ಅವಧಿಯಲ್ಲಿ ಮೀನುಗಾರರು ಎಚ್ಚರ ವಹಿಸುವಂತೆ ಬೆಂಗಳೂರು ಹವಾಮಾನ ಕೇಂದ್ರದ ನಿರ್ದೇಶಕರು ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News