ಕನಿಷ್ಠ ಬೆಂಬಲ ಬೆಲೆ ಕೊನೆಗೊಂಡರೆ ರಾಜಕೀಯ ತೊರೆಯುತ್ತೇನೆ: ಮನೋಹರ್ ಲಾಲ್ ಖಟ್ಟರ್
Update: 2020-12-31 22:50 IST
ಹೊಸದಿಲ್ಲಿ: ರೈತರಿಗೆ ಕನಿಷ್ಠ ಬೆಂಬಲ ಬೆಲೆ ನೀಡಲು ಸಾಧ್ಯವಾಗದಿದ್ದರೆ ತಾನು ರಾಜಕೀಯ ತೊರೆಯುತ್ತೇನೆ ಎಂದು ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಹೇಳಿದ್ದಾರೆ.
ಕೇಂದ್ರ ಸರಕಾರದ ಮೂರು ಕೃಷಿ ನೀತಿಗಳನ್ನು ವಿರೋಧಿಸಿ ಹರ್ಯಾಣದ ರೈತರು ಭಾರೀ ಪ್ರತಿಭಟನೆ ನಡೆಸುತ್ತಿರುವ ನಡುವೆ ಖಟ್ಟರ್ ಈ ಹೇಳಿಕೆ ನೀಡಿದ್ದಾರೆ. ಒಂದು ದಿನದ ಹಿಂದಷ್ಟೇ ಆಡಳಿತ ಬಿಜೆಪಿ ಮತ್ತು ಜೆಜೆಪಿ ಹರ್ಯಾಣದ ಪುರಸಭೆ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿತ್ತು.
“ಹರ್ಯಾಣದಲ್ಲಿ ಕನಿಷ್ಟ ಬೆಂಬಲ ಬೆಲೆ ಮುಂದುವರಿಸಲು ನಾವು ಬದ್ಧರಾಗಿದ್ದೇವೆ. ಕನಿಷ್ಠ ಬೆಂಬಲ ಬೆಲೆಯನ್ನು ಕೊನೆಗೊಳಿಸಲು ಯಾರಾದರೂ ಪ್ರಯತ್ನಿಸಿದರೆ ಮನೋಹರ್ ಲಾಲ್ ರಾಜಕೀಯವನ್ನು ತೊರೆಯುತ್ತಾರೆ” ಎಂದು ಅವರು ಹೇಳಿದ್ದಾರೆ.