ಹೆಬ್ರಿ ಖಾಸಗಿ ಕಾಲೇಜು ಉಪನ್ಯಾಸಕ ಆತ್ಮಹತ್ಯೆ

Update: 2021-01-01 11:03 GMT
ಸಾಂದರ್ಭಿಕ ಚಿತ್ರ

ಹೆಬ್ರಿ, ಜ.1: ಹೆಬ್ರಿ ಖಾಸಗಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರೊಬ್ಬರು ನೇಣಿಗೆ ಶರಣಾಗಿರುವ ಘಟನೆ ಇಂದು ನಡೆದಿದೆ. ಮೃತರನ್ನು ಹೆಬ್ರಿಯ ಬಡಗುಡ್ಡೆ ಬಾಡಿಗೆ ಮನೆ ನಿವಾಸಿ ವೆಂಕಟೇಶ್ ಎಂದು ಗುರುತಿಸಲಾಗಿದೆ. ಮೂಡಬಿದ್ರೆಯ ಕಾಲೇಜಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಇವರು, ತನ್ನ ಪತ್ನಿ ಶಿಕ್ಷಕಿಯಾಗಿ ದುಡಿಯುತ್ತಿರುವ ಹೆಬ್ರಿ ಕಾಲೇಜಿಗೆ ಮಾರ್ಚ್ ತಿಂಗಳಲ್ಲಿ ಸೇರ್ಪಡೆಗೊಂಡಿದ್ದರು. ಆ ಸಂದರ್ಭದಲ್ಲಿ ಕೊರೋನಾ ಲಾಕ್ ಡೌನ್‌ನಿಂದಾಗಿ ಇವರು ಕೆಲಸ ಇಲ್ಲದೆ ಮನೆಯಲ್ಲೇ ಉಳಿದುಕೊಂಡಿದ್ದರು.

ಕಾಲೇಜು ಆರಂಭದ ಮೊದಲ ದಿನ ಕಾಲೇಜಿಗೆ ಬಂದ ಇವರು, ಅಲ್ಲಿಂದ ವಾಪಾಸ್ಸು ಬಂದಿದ್ದರು. ಮನೆಯಲ್ಲಿ ಯಾರು ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News