ಪ್ರಧಾನ ಮಂತ್ರಿ ಶಿಷ್ಯ ವೇತನ ಯೋಜನೆಗೆ ಅರ್ಜಿ ಆಹ್ವಾನ

Update: 2021-01-01 17:54 GMT

ಉಡುಪಿ, ಜ.1: ಪಿಯುಸಿ ಎರಡನೇ ವರ್ಷ ಹಾಗೂ ಡಿಪ್ಲೋಮ ಮೂರನೇ ವರ್ಷದಲ್ಲಿ ಶೇ.60 ಅಂಕ ಪಡೆದು ಪ್ರಸಕ್ತ ಸಾಲಿನಲ್ಲಿ ತಾಂತ್ರಿಕ ಮತ್ತು ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆದಿರುವ ಮಾಜಿ ಸೈನಿಕರ ಮಕ್ಕಳು ಪ್ರಧಾನ ಮಂತ್ರಿ ಶಿಷ್ಯ ವೇತನ ಯೋಜನೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

ಅರ್ಜಿ ಸಲ್ಲಿಸಲು ಫೆಬ್ರವರಿ 28 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ -www.ksb.gov.in- ಅನ್ನು ಸಂಪರ್ಕಿಸುವಂತೆ ಮಂಗಳೂರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿದೇಶರ್ಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News