ಸಿ.ಎಂ.ಇಬ್ರಾಹೀಂ ಕಾಂಗ್ರೆಸ್ ಪಕ್ಷ ತೊರೆಯುವುದಿಲ್ಲ: ಸತೀಶ್ ಜಾರಕಿಹೊಳಿ
Update: 2021-01-02 15:24 IST
ಯಾದಗಿರಿ, ಜ.2: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಸಿ.ಎಂ.ಇಬ್ರಾಹೀಂ ಯಾವುದೇ ಕಾರಣಕ್ಕೂ ಪಕ್ಷ ಬಿಡುವುದಿಲ್ಲ ಎಂದು ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ವೈಯಕ್ತಿಕ ಕಾರ್ಯಕ್ರಮದ ನಿಮಿತ್ತ ಶಹಾಪುರ ಪಟ್ಟಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಿ.ಎಂ.ಇಬ್ರಾಹೀಂ ನಮ್ಮ ಪಕ್ಷದ ಹಿರಿಯ ಮುಖಂಡರು ಅವರು ಯಾವಾಗಲೂ ನಮ್ಮ ಜೊತೆಗೆ ಇರುತ್ತಾರೆ ಎಂದರು.
ಈ ಸಂದರ್ಭದಲ್ಲಿ ಶಹಾಪುರದ ಹಿರಿಯ ಮುಖಂಡರಾದ ದೇವಿಂದ್ರಪ್ಪಗೌಡ ಗೌಡಗೇರಿ, ಜಿಲ್ಲಾ ಮಾನವ ಬಂಧುತ್ವ ವೇದಿಕೆಯ ಅಧ್ಯಕ್ಷ ಅಶೋಕ ಹೊಸಮನಿ ಗೋಗಿ, ತಾಲೂಕು ಅಧ್ಯಕ್ಷ ಮೌನೇಶ್ ಬೀರನೂರ, ರಂಗನಾಥ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.