ಶಾಲೆ-ಕಾಲೇಜು ವಿದ್ಯಾರ್ಥಿಗಳಿಗೆ ಸಾರಿಗೆ ಬಸ್‍ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ
ಬೆಂಗಳೂರು, ಜ.2: ಶಾಲಾ-ಕಾಲೇಜುಗಳು ಆರಂಭವಾಗಿರುವುದರಿಂದ ವಿದ್ಯಾರ್ಥಿಗಳು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಯ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
6ರಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳು, 12ನೇ ತರಗತಿ ವಿದ್ಯಾರ್ಥಿಗಳು ಹಾಗೂ ಪದವಿ, ಸ್ನಾತಕೋತ್ತರ, ಡಿಪ್ಲೊಮಾ, ತಾಂತ್ರಿಕ, ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳು ಸಾರಿಗೆ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.
ಸೂಚನೆ: 2019-20ನೇ ಸಾಲಿನಲ್ಲಿ ವಿತರಣೆ ಮಾಡಿರುವ ಸ್ಮಾರ್ಟ್‍ಕಾರ್ಡ್ ವಿದ್ಯಾರ್ಥಿ ಪಾಸು ಅಥವಾ ಪ್ರಸ್ತುತ ಸಾಲಿನಲ್ಲಿ ಶಾಲಾ-ಕಾಲೇಜಿಗೆ ದಾಖಲಾಗಿರುವ ಶುಲ್ಕ ರಸೀದಿ, ಗುರುತಿನ ಚೀಟಿಯೊಂದಿಗೆ ವಿದ್ಯಾರ್ಥಿಗಳು ಸಂಸ್ಥೆಯ ಬಸ್‍ಗಳಲ್ಲಿ ಪ್ರಯಾಣಿಸಬಹುದಾಗಿದೆ.
ಸದರಿ ವಿದ್ಯಾರ್ಥಿಗಳು 2020-21ನೇ ಸಾಲಿನ ವಿದ್ಯಾರ್ಥಿ ಬಸ್ ಪಾಸಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ, ಬೆಂಗಳೂರು ಒನ್ ಕೇಂದ್ರಗಳಲ್ಲಿ ಶೀಘ್ರವಾಗಿ ಪಾಸು ಪಡೆಯಬಹುದಾಗಿದೆ. ವಿದ್ಯಾರ್ಥಿ ಬಸ್‍ಪಾಸಿನ ಆನ್‍ಲೈನ್ ಅರ್ಜಿಯನ್ನು ಸಂಸ್ಥೆಯ ವೆಬ್‍ಸೈಟ್ https://mybmtc.karnataka.gov.in ಅಥವಾ ಸೇವಾಸಿಂಧು ಪೋರ್ಟಲ್ ಅಥವಾ ಬೆಂಗಳೂರು ಒನ್ ಕೇಂದ್ರಗಳಲ್ಲಿ ಸಲ್ಲಿಸಬಹುದಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.