×
Ad

ಪ.ಜಾತಿ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ

Update: 2021-01-02 21:08 IST

ಉಡುಪಿ, ಜ.2: ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಯಂತ್ರಚಾಲಿತ ದ್ವಿಚಕ್ರ ವಾಹನಕ್ಕಾಗಿ, ಶೇ.75ಕ್ಕಿಂತ ಹೆಚ್ಚಿನ ಪ್ರಮಾಣದ ತೀವ್ರತರನಾದ ಅಂದರೆ ಸೊಂಟದ ಕೆಳಭಾಗದಲ್ಲಿ, ಕಾಲುಗಳಲ್ಲಿ ಬಲವಿಲ್ಲದ ಆದರೆ ಎರಡೂ ಕೈಗಳು ಸ್ವಾಧೀನದಲ್ಲಿದ್ದು ಇತರ ಎಲ್ಲಾ ರೀತಿಯಲ್ಲಿ ಸದೃಢವಾಗಿರುವ, ತಹಶೀಲ್ದಾರರಿಂದ ಪಡೆದ ಜಾತಿ ಮತ್ತು 2ಲ.ರೂ ಒಳಗಿನ ಆದಾಯ ಪ್ರಮಾಣ ಪತ್ರ ಹೊಂದಿರುವ ವಿದ್ಯಾರ್ಥಿ/ಖಾಸಗಿ ಅಥವಾ ಸ್ವ-ಉದ್ಯೋಗದಲ್ಲಿರುವ ವ್ಯಕ್ತಿಗಳಿಂದ ಪ.ಜಾ. ಕೋಟಾದಡಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜನವರಿ 20 ಕೊನೆಯ ದಿನವಾಗಿದೆ.ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂರವಾಣಿ ಸಂಖ್ಯೆ:0820-2574810/811 ಅಥವಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿಂಡಿಕೇಟ್ ಬ್ಯಾಂಕ್ ಹತ್ತಿರ, ಜಿಲ್ಲಾ ಪಂಚಾಯತ್ ವಿಭಾಗ, ರಜತಾದ್ರಿ, ಮಣಿಪಾಲ ಕಛೇರಿಯನ್ನು ಸಂಪರ್ಕಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News