ಜ.8ರಿಂದ 29ರವರೆಗೆ ಉದರ ದರ್ಶಕ ಶಸ್ತ್ರಚಿಕಿತ್ಸಾ ಶಿಬಿರ
Update: 2021-01-02 21:50 IST
ಮಂಗಳೂರು, ಜ.2: ದ.ಕ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಉದರ ದರ್ಶಕ ಶಸ್ತ್ರಚಿಕಿತ್ಸಾ ಶಿಬಿರವು ಜ.8ರಂದು ತಾಲೂಕು ಆಸ್ಪತ್ರೆ ಬೆಳ್ತಂಗಡಿ, ಜ.12ರಂದು ತಾಲೂಕು ಆಸ್ಪತ್ರೆ ಬಂಟ್ವಾಳ, 15ರಂದು ಸಾರ್ವಜನಿಕ ಆಸ್ಪತ್ರೆ ಪುತ್ತೂರು, 22ರಂದು ಸಾರ್ವಜನಿಕ ಆಸ್ಪತ್ರೆ ಸುಳ್ಯ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ವಿಟ್ಲ, 25ರಂದು ನಗರ ಸರಕಾರಿ ಆರೋಗ್ಯ ಕೇಂದ್ರ ಉಳ್ಳಾಲ, 27ರಂದು ಸಾರ್ವಜನಿಕ ಆಸ್ಪತ್ರೆ ಪುತ್ತೂರು, 29ರಂದು ಸರಕಾರಿ ಆರೋಗ್ಯ ಕೇಂದ್ರ ಮೂಡುಬಿದಿರೆ ಹಾಗೂ ಸರಕಾರಿ ಆರೋಗ್ಯ ಕೇಂದ್ರ ಕಡಬದಲ್ಲಿ ಜರಗಲಿದೆ.
ಕೋವಿಡ್-19 ಶಿಷ್ಟಾಚಾರದ ಪ್ರಕಾರ ಫಲಾನುಭವಿಗಳಿಗೆ ಉದರದರ್ಶಕ ಶಸ್ತ್ರಚಿಕಿತ್ಸ ಶಿಬಿರ ನಡೆಯುವ ಹಿಂದಿನ 72 ಗಂಟೆಯೊಳಗೆ ಆರ್‌ಟಿ-ಪಿಸಿಆರ್ ಟೆಸ್ಟ್ ಮಾಡಿದ ರಿಪೋರ್ಟ್‌ನ್ನು ಕೇಸ್ ಶೀಟ್‌ನಲ್ಲಿ ಲಗತ್ತಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಪ್ರಕಟನೆ ತಿಳಿಸಿದೆ.