ವಿಮಾನ ನಿಲ್ದಾಣದಲ್ಲಿ ಪೇಸ್ಟ್ ರೂಪದಲ್ಲಿದ್ದ 53 ಲಕ್ಷ ರೂ. ಮೌಲ್ಯದ ಚಿನ್ನ ಜಪ್ತಿ
Update: 2021-01-02 22:04 IST
ಬೆಂಗಳೂರು, ಜ.2: ಕೆಂಪೇಗೌಡ ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿದೇಶದಿಂದ ಚಿನ್ನ ಕಳ್ಳ ಸಾಗಾಣಿಕೆ ಮಾಡಿಕೊಂಡು ಬಂದ ಆರೋಪದಡಿ ಓರ್ವನನ್ನು ವಶಕ್ಕೆ ಪಡೆದಿರುವ ಕಸ್ಟಂ ವಿಭಾಗದ ಅಧಿಕಾರಿಗಳು, ಪೇಸ್ಟ್ ರೂಪದಲ್ಲಿದ್ದ ಸುಮಾರು 53 ಲಕ್ಷ ರೂಪಾಯಿ ಮೌಲ್ಯದ 1,024 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ಕೊಡಗು ಜಿಲ್ಲೆಯ ವಿರಾಜಪೇಟೆ ಮೂಲದ 38 ವರ್ಷದ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದ್ದು, ಈತ ದುಬೈನಿಂದ ಬೆಂಗಳೂರಿನ ಕೆಂಪೇಗೌಡ ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಎನ್ನಲಾಗಿದೆ.
ಈತನ ಚಲನವಲನಗಳ ಮೇಲೆ ಅನುಮಾನಗೊಂಡ ಅಧಿಕಾರಿಗಳು ಆತನನ್ನು ವಿಚಾರಣೆ ನಡೆಸಿದಾಗ ಪೇಸ್ಟ್ ರೂಪದಲ್ಲಿರುವ ಚಿನ್ನವನ್ನು ತನ್ನ ಒಳ ಉಡುಪಿಯಲ್ಲಿ ಮರೆಮಾಚಿ ಪ್ಲಾಸ್ಟಿಕ್ ಕವರ್ ನಲ್ಲಿ ಸಾಗಾಣಿಕೆ ಮಾಡುತ್ತಿರುವುದು ಪತ್ತೆಯಾಗಿದೆ ಎಂದು ವರದಿಯಾಗಿದೆ.