ಮುಖ್ಯಮಂತ್ರಿ ಕುರ್ಚಿ ಅಲುಗಾಡುತ್ತಿಲ್ಲ, ಖಾಲಿಯೂ ಇಲ್ಲ: ನಳೀನ್ ಕುಮಾರ್ ಕಟೀಲು

Update: 2021-01-02 17:19 GMT

ಶಿವಮೊಗ್ಗ: ಪಕ್ಷದ ಬಗ್ಗೆ ಬಿಜೆಪಿ ಹಿರಿಯ ಮುಖಂಡ, ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಯನ್ನು ಕೇಂದ್ರದ ಶಿಸ್ತು ಸಮಿತಿಗೆ ಕಳುಹಿಸಲಾಗಿದೆ. ಈ ಬಗ್ಗೆ ಪಕ್ಷ ಸೂಕ್ತ ಸಮಯದಲ್ಲಿ ಕ್ರಮ‌ ಕೈಗೊಳ್ಳಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಹೇಳಿದರು.

ಬಿಜೆಪಿ ಕಾರ್ಯಾಕಾರಿಣಿ ಸಭೆಗೆ ಶಿವಮೊಗ್ಗಕ್ಕೆ ಆಗಮಿಸಿದ ಹಿನ್ನೆಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಕುರ್ಚಿ ಅಲುಗಾಡುತ್ತಿಲ್ಲ, ಖಾಲಿಯೂ ಇಲ್ಲ. ವಿರೋಧ ಪಕ್ಷದ ನಾಯಕರ ಕುರ್ಚಿ ಖಾಲಿ ಇರಬಹುದು. ಸಿಎಂ ಬದಲಾವಣೆ ವಿಷಯ ಎಲ್ಲಿಯೂ ಚರ್ಚೆ ಆಗಿಲ್ಲ. ಹಾಗಾಗಿ ಮುಂದಿನ ಎರಡು ವರ್ಷ ಯಡಿಯೂರಪ್ಪನವರೇ ಸಿಎಂ ಆಗಿರುತ್ತಾರೆ ಎಂದು ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ತೆರೆ ಎಳೆದರು.

ಈ ಬಾರಿಯ ಗ್ರಾಮ‌ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ  46 ಸಾವಿರ ಜನ ಅಭ್ಯರ್ಥಿಗಳು ಚುನಾಯಿತರಾಗಿದ್ದಾರೆ. ಮುಂದಿನ ದಿನಗಳಲ್ಲಿ ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಗೆಲುವಿನ ಕಡೆ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದ ಅವರು, ಜೆಡಿಎಸ್ ಜೊತೆ ಸಾಪ್ಟ್ ಕಾರ್ನರ್ ಪ್ರಶ್ನೆಯೇ ಉದ್ಭವವಾಗಲ್ಲ. ಅದು ಸಂದರ್ಭಕ್ಕನುಗುಣವಾಗಿ ಪಕ್ಷದ ನಿಲುವು ತೆಗೆದುಕೊಳ್ಳುತ್ತದಷ್ಟೇ ಎಂದರು.

ಎಸ್ಡಿಪಿಐ ಒಂದು ರಾಜಕೀಯ ಪಕ್ಷವಾಗಿದ್ದು, ಅದರ ದೇಶದ್ರೋಹಿ ಚಟುವಟಿಕೆಗಳ ಬಗ್ಗೆ ಮಾಹಿತಿ ಸಂಗ್ರಹ ನಡೆಯುತ್ತಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದ ಅವರು, ಪಿಎಫ್ಐ ಬಗ್ಗೆಯೂ ಗಮನಹರಿಸಲಾಗುವುದು ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News