ರಸ್ತೆ ಅಪಘಾತ: ಬೈಕ್ ಸವಾರ ಮೃತ್ಯು

Update: 2021-01-03 14:03 GMT

ಮಂಡ್ಯ, ಜ.3: ಮದ್ದೂರಿನ ಚನ್ನೇಗೌಡನದೊಡ್ಡಿ ಬಳಿ ಮೈಸೂರು ಬೆಂಗಳೂರು ಹೆದ್ದಾರಿಯಲ್ಲಿ ಟಿಪ್ಪರ್‍ಗೆ ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ.

ಮಂಡ್ಯ ತಾಲೂಕು ಚಿಂದಗಿರಿದೊಡ್ಡಿ ಗ್ರಾಮದ ಅಖಿಲ ಕರ್ನಾಟಕ ಅಂಬರೀಷ್ ಅಭಿಮಾನಿಗಳ ಸಂಘದ ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸ್ ಅವರ ಪುತ್ರ ಬಾಲಾಜಿಗೌಡ(24) ಅಪಘಾತದಲ್ಲಿ ಸಾವನ್ನಪ್ಪಿದವ.

ಬಾಲಾಜಿಗೌಡ ಕಾರ್ಯನಿಮಿತ್ತ ಮದ್ದೂರಿಗೆ ತೆರಳಿ ಗ್ರಾಮಕ್ಕೆ ವಾಪಸ್ ಬರುತ್ತಿದ್ದಾಗ ಟಿಪ್ಪರ್ ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮದ್ದೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಖಿಲ ಕರ್ನಾಟಕ ಅಂಬರೀಷ್ ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ಬಾಲಾಜಿಗೌಡ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News