×
Ad

ಬಿಜೆಪಿ ಕಾರ್ಯಕರ್ತರಿಂದ ‘ಪಾಕಿಸ್ತಾನ್ ಝಿಂದಾಬಾದ್’ ಘೋಷಣೆಯ ವೀಡಿಯೊ ವೈರಲ್ : ದೂರು

Update: 2021-01-03 22:52 IST
ಫೈಲ್ ಚಿತ್ರ

ಬೆಳ್ತಂಗಡಿ, ಜ.3: ಉಜಿರೆಯಲ್ಲಿ ಇತ್ತೀಚೆಗೆ ಗ್ರಾಪಂ ಚುನಾವಣೆಯ ಮತ ಎಣಿಕೆಯ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರ ವಿಜಯೋತ್ಸವದ ನಡುವೆ ‘ಪಾಕಿಸ್ತಾನ ಝಿಂದಾಬಾದ್’ ಎಂಬ ಘೋಷಣೆಯ ಕೂಗು ಕೇಳಿಸುತ್ತಿರುವ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಕಳೆದೆರಡು ದಿನಗಳಿಂದ ಹರಿದಾಡುತ್ತಿದೆ.

ಉಜಿರೆ ಕಾಲೇಜಿನ ಎದುರುಗಡೆ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವದಲ್ಲಿ ಘೋಷಣೆಗಳನ್ನು ಕೂಗುತ್ತಿರುವುದರ ನಡುವೆ ‘ಪಾಕಿಸ್ತಾನ್ ಮುರ್ದಾಬಾದ್’ ಎಂಬ ಘೋಷಣೆ ಕೂಗುತ್ತಿರುವುದರೊಂದಿಗೆ ಅದೇ ಗುಂಪಿನ ಮಧ್ಯೆ ವ್ಯಕ್ತಿಯೋರ್ವ ‘ಪಾಕಿಸ್ತಾನ್ ಝಿಂದಾಬಾದ್‌‘ ಎಂದು ಘೋಷಣೆ ಕೂಗುತ್ತಿರುವುದು ವೈರಲ್ ವೀಡಿಯೋದಲ್ಲಿ ಕೇಳಿಸುತ್ತಿದೆ.

ಉಜಿರೆಯಲ್ಲಿ ದೇಶದ್ರೋಹದ ಘೋಷಣೆ ಕೂಗಿದ್ದು ಬಿಜೆಪಿ ಕಾರ್ಯಕರ್ತರು. ಇದರ ವೀಡಿಯೊ ಹರಿದಾಡುತ್ತಿದ್ದು, ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಎಸ್‌ಡಿಪಿಐ ಕಾರ್ಯಕರ್ತರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ವೈರಲ್ ವೀಡಿಯೊವನ್ನು ಸಂಗ್ರಹಿಸಲಾಗಿದ್ದು, ಅವುಗಳನ್ನು ಪರಿಶೀಲಿಸಲಾಗುತ್ತಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪಾಕ್ ಪರ ಘೋಷಣೆ ಹೆಸರಲ್ಲಿ ಅವಹೇಳನ : ದೂರು

ಉಜಿರೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ತನ್ನ ಭಾವಚಿತ್ರ ಬಳಸಿ ಅವಹೇಳನ ಮಾಡಲಾಗಿದೆ ಎಂದು ಬಿಜೆಪಿ ಕಾರ್ಯಕರ್ತನೋರ್ವ ಬೆಳ್ತಂಗಡಿ ಠಾಣೆಯಲ್ಲಿ ದೂರು ನೀಡಿದ್ದಾರೆ.

ಉಜಿರೆ ನಿವಾಸಿ ಯುವಕನೋರ್ವ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಫೋಟೊ ಸಹಿತ ಹರಿಯಬಿಡಲಾಗಿತ್ತು. ಈ ವಿಚಾರವಾಗಿ ತನ್ನ ಮಾನಹಾನಿಗೆ ಪ್ರಯತ್ನಿಸಲಾಗಿದೆ ಎಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News