×
Ad

ಮಂಗಳೂರಿಗೆ ಆಗಮಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್

Update: 2021-01-03 22:59 IST

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯಲಿರುವ ಕಾಂಗ್ರೆಸ್ ಪಕ್ಷದ ಸಂಕಲ್ಪ ಸಮಾವೇಶದ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಇಂದು ಮಂಗಳೂರಿಗೆ ಆಗಮಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್ ಅವರನ್ನು ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಅಧ್ಯಕ್ಷರಾದ ಸದಾಶಿವ ಉಳ್ಳಾಲ್, ಕೆಪಿಸಿಸಿ ಮಾಜಿ ಕಾರ್ಯದರ್ಶಿಗಳಾದ ಟಿ.ಎಂ. ಶಹೀದ್, ನವೀನ್ ಚಂದ್ರ ಶೆಟ್ಟಿ, ಎನ್.ಎಸ್.ಯು.ಐ ಮಾಜಿ ಅಧ್ಯಕ್ಷ ತೇಜಸ್ವಿರಾಜ್ , ಕಾರ್ಪೋರೇಟರ್ ಅನಿಲ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News