×
Ad

ಧಾರ್ಮಿಕ ಭಾವನೆ ಕೆರಳಿಸುವ ಕೃತ್ಯ ನಡೆಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ : ವೇದವ್ಯಾಸ ಕಾಮತ್

Update: 2021-01-03 23:02 IST

ಮಂಗಳೂರು : ಅತ್ತಾವರ ಬಾಬುಗುಡ್ಡೆಯಲ್ಲಿ ಭಗವಾನ್ ಶ್ರೀ ಬಬ್ಬುಸ್ವಾಮಿ ಕ್ಷೇತ್ರ ಹಾಗೂ ಭಗವಾನ್ ಶ್ರೀ ದೈವರಾಜ ಕೋರ್ದಬ್ಬು ದೇವಸ್ಥಾನದ ಕಾಣಿಕೆ ಹುಂಡಿಯೊಳಗೆ ಧಾರ್ಮಿಕ ಭಾವನೆಗೆ ಧಕ್ಕೆ ತರುವ ನಿಟ್ಟಿನಲ್ಲಿ ನೋಟಿನ ಮೇಲೆ ದೇವತೆಗಳ ಕುರಿತು ಅವಹೇಳನಕಾರಿ ಬರೆದು ಹಾಕಿರುವಂತಹ ಕೃತ್ಯವನ್ನು ಶಾಸಕ ವೇದವ್ಯಾಸ್ ಕಾಮತ್ ಖಂಡಿಸಿದ್ದಾರೆ.

ಧಾರ್ಮಿಕ ಭಾವನೆಗಳಿಗೆ ಚ್ಯುತಿ ತರುವಂತಹ ಕೃತ್ಯಗಳನ್ನು ಸಹಿಸುವುದು ಸಾಧ್ಯವಿಲ್ಲ. ಕ್ಷೇತ್ರದ ಪಾವಿತ್ರ್ಯತೆಗೆ ಧಕ್ಕೆಯಾದರೆ ಸಮಾಜದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಉದ್ದೇಶ ಪೂರ್ವಕವಾಗಿ ಇಂತಹ ಕೆಲಸ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಜರಗಿಸಲಾಗುವುದು ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.

ನಕಲಿ ನೋಟಿನ ಮೇಲೆ  ದೇವತೆಗಳ ಕುರಿತು ಅವಹೇಳನಕಾರಿ ಬರಹದಿಂದ ಸಮಾಜಕ್ಕೆ ಅತ್ಯಂತ ನೋವು ಉಂಟಾಗಿದೆ. ಈ ಕುರಿತು ಪೊಲೀಸ್ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದೇನೆ. ತಕ್ಷಣವೇ ತಪ್ಪಿತಸ್ಥರನ್ನು ಬಂಧಿಸು ಕಾನೂನಾತ್ಮಕ ಕ್ರಮ ಜರಗಿಸಲು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News