ಕಾರು ಢಿಕ್ಕಿ: ಪಾದಚಾರಿ ಮೃತ್ಯು

Update: 2021-01-04 15:47 GMT

ಕಾಪು, ಜ.4: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಜ.3ರಂದು ಮಧ್ಯಾಹ್ನ ವೇಳೆ ಪಾಂಗಾಳ ಜನಾರ್ದನ ದೇವಸ್ಥಾನ ಹತ್ತಿರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಮೃತರನ್ನು ಕೃಷ್ಣಪ್ಪಪೂಜಾರಿ ಎಂದು ಗುರುತಿಸಲಾಗಿದೆ. ಉಡುಪಿ ಕಡೆ ಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಕಾರು, ರಸ್ತೆ ಬದಿಯಲ್ಲಿ ನಿಂತಿದ್ದ ಕೃಷ್ಣಪ್ಪ ಪೂಜಾರಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News