ಎಸ್‌ಡಿಪಿಐ ಆತೂರು : ಲೋ ವೋಲ್ಟೇಜ್ ಸಮಸ್ಯೆ ಬಗೆಹರಿಸುವಂತೆ ಮೆಸ್ಕಾಂಗೆ ಮನವಿ

Update: 2021-01-04 17:40 GMT

ಕಡಬ : ಕೊಯಿಲ ಮತ್ತು ರಾಮಕುಂಜ ಗ್ರಾಮ ವ್ಯಾಪ್ತಿಯ ಹಲವಾರು ಹಳ್ಳಿ ಪ್ರದೇಶಗಳಿಗೆ  ನಿರಂತರವಾಗಿ ಲೋ ವೋಲ್ಟೇಜ್ ಸಮಸ್ಯೆ ಉದ್ಭವಿಸಿದ್ದು, ಶೀಘ್ರದಲ್ಲೇ ಸಮಸ್ಯೆ ಬಗೆಹರಿಸುವಂತೆ ಪುತ್ತೂರು ಮೆಸ್ಕಾಂ ಇಲಾಖೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಆತೂರು ವಲಯದ ವತಿಯಿಂದ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಗ್ರಾಮ ಪಂಚಾಯತ್ ಸದಸ್ಯ ಹಸನ್ ಸಜ್ಜಾದ್ ಮಾತನಾಡಿ ಲೋ ವೋಲ್ಟೇಜ್ ಸಮಸ್ಯೆ ಇವತ್ತು ನಿನ್ನೆಯದಲ್ಲ ಹಲವಾರು ವರ್ಷಗಳಿಂದ ಮೆಸ್ಕಾಂಗೆ ಎಸ್‌ಡಿಪಿಐ ಸೇರಿದಂತೆ ಹಲವಾರು ನಾಗರಿಕರು ಮನವಿ ಸಲ್ಲಿಸಿದ್ದರು, ಆದರೆ ಈ ಬಗ್ಗೆ ಮೆಸ್ಕಾಂ ಗಣನೆಗೆ ತೆಗೆದುಕೊಳ್ಳದ ಕಾರಣ ಸಮಸ್ಯೆ ಮತ್ತಷ್ಟು ದ್ವಿಗುಣಗೊಂಡಿದ್ದು, ಮನೆಯ ವಿದ್ಯುತ್ ಉಪಕರಣ ಸೇರಿದಂತೆ, ಕೃಷಿಯನ್ನೇ ಅವಲಂಬಿತರಾದ ರೈತರಿಗೆ ಪಂಪ್ ಸೆಟ್ ಮೂಲಕ ತೋಟಕ್ಕೆ ನೀರು ಹಾಯಿಸಲು ಕೂಡಾ ಕಷ್ಟಕರವಾಗಿದ್ದರಿಂದ ಹಲವಾರು ಮಂದಿ ಸಂಕಷ್ಟ ಅನುಭವಿಸುತ್ತಿ ದ್ದಾರೆ, ಈ ಬಗ್ಗೆ ಮೆಸ್ಕಾಂ ಇಲಾಖೆ ಶೀಘ್ರ ಸ್ಪಂದಿಸದಿದ್ದಲ್ಲಿ ಎಸ್‌ಡಿಪಿಐ ಗ್ರಾಮದ ಮತ್ತು ಊರಿನ ನಾಗರಿಕರ ಜೊತೆಗೂಡಿ ಮೆಸ್ಕಾಂಗೆ ಮುತ್ತಿಗೆ ಹಾಕಲಿದ್ದೇವೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಕಡಬ ತಾಲೂಕು ಜೊತೆ ಕಾರ್ಯದರ್ಶಿ ಬಶೀರ್ ಹಲ್ಯಾರ, ಎಸ್‌ಡಿಪಿಐ ಆತೂರು ವಲಯಾಧ್ಯಕ್ಷ ಇಸ್ಮಾಯಿಲ್ ಆತೂರು, ಎಸ್‌ಡಿಪಿಐ ವಲಯ ಸಮಿತಿ ಸದಸ್ಯ ಶರೀಫ್ ಬಿಎಸ್ ಮುಂತಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News