ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ದ ನಿರ್ಣಯ ಅಂಗೀಕರಿಸಲು ವಿಶೇಷ ಅಧಿವೇಶನ: ಈಗ ಪಶ್ಚಿಮಬಂಗಾಳದ ಸರದಿ

Update: 2021-01-05 07:10 GMT

ಕೋಲ್ಕತಾ: ಕೇಂದ್ರ ಸರಕಾರದ ವಿವಾದಾತ್ಮಕ ಮೂರು ಕೃಷಿ ಕಾಯ್ದೆಗಳ ವಿರುದ್ದ ನಿರ್ಣಯ ಮಂಡಿಲು ವಿಶೇಷ ಅಧಿವೇಶನ ಕರೆಯಲಾಗುವುದು ಎಂದು ಪಶ್ಚಿಮಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಿಳಿಸಿದ್ದಾರೆ.
ಈ  ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಬ್ಯಾನರ್ಜಿ, "ಮೂರು ನೂತನ ಕೃಷಿ ಕಾನೂನುಗಳ ವಿರುದ್ದ ನಿರ್ಣಯ ಅಂಗೀಕರಿಸಲು ಶೀಘ್ರವೇ  ವಿಶೇಷ ಅಧಿವೇಶನ ನಡೆಸಲಾಗುವುದು . ನಾನು  ರೈತರ ಪರ ಇದ್ದೇನೆ. ದೇಶ ಹಾಗೂ ರೈತರ ಹಿತದ ದೃಷ್ಟಿಯಿಂದ ಈಕಾಯ್ದೆಯನ್ನು ಹಿಂದಕ್ಕೆ ಪಡೆಯಬೇಕು''ಎಂದು ಹೇಳಿದ್ದಾರೆ.
ಕೃಷಿ ಕಾನೂನುಗಳ ವಿರುದ್ಧ 5 ರಾಜ್ಯಗಳು ಈಗಾಗಲೇ ನಿರ್ಣಯ ಅಂಗೀಕರಿಸಿವೆ. ಈ ಕುರಿತು ಅಧಿವೇಶನ ಕರೆಯುವಂತೆ ಕಾಂಗ್ರೆಸ್ ಹಾಗೂ ಎಡಪಕ್ಷಗಳು ಮಮತಾ ಸರಕಾರವನ್ನು ಒತ್ತಾಯಿಸಿದ್ದವು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News