11 ಮಂದಿಗೆ ಮಾತ್ರ ರೂಪಾಂತರಿತ ಕೊರೋನ ಸೋಂಕು ದೃಢ: ಡಾ.ಕೆ.ಸುಧಾಕರ್ ಸ್ಪಷ್ಟನೆ

Update: 2021-01-05 13:55 GMT

ಬೆಂಗಳೂರು, ಜ.5: ಯು.ಕೆ.ಯಿಂದ ಬಂದಿರುವ 75 ಮಂದಿ ಹಾಗೂ ಸಂಪರ್ಕಿತರ ಪೈಕಿ 37 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ಈ ಪೈಕಿ 11 ಮಂದಿಗೆ ಮಾತ್ರ ರೂಪಾಂತರಗೊಂಡ ಕೊರೋನ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವರಿಗೆ ಸಂಬಂಧಿಸಿದಂತೆ 17 ಮಂದಿ ಪ್ರಾಥಮಿಕ ಸಂಪರ್ಕಿತರಾಗಿದ್ದಾರೆ. ರೂಪಾಂತರಗೊಂಡ ಸೋಂಕು ಬಂದವರ ಸಂಖ್ಯೆ ಏರಿಕೆಯಾಗಿಲ್ಲ ಎಂದು ತಿಳಿಸಿದರು.

ಗೃಹ ಇಲಾಖೆಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು, ಯು.ಕೆ.ಯಿಂದ ಬಂದ ಉಳಿದವರ ಸಂಪರ್ಕ ಪತ್ತೆ ಮಾಡಲು ಸೂಚಿಸಲಾಗಿದೆ. ಅದೇ ರೀತಿ ಬಿಬಿಎಂಪಿ ಆಯುಕ್ತರೊಂದಿಗೂ ಚರ್ಚಿಸಲಾಗಿದೆ. ಆದಷ್ಟು ಶೀಘ್ರದಲ್ಲಿ ಉಳಿದವರ ಸಂಪರ್ಕ ಪತ್ತೆಯಾಗಲಿದೆ ಎಂದು ಸುಧಾಕರ್ ಹೇಳಿದರು.

ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು, ಶಿಕ್ಷಕರಿಗೆ ಕೊರೋನ ಬಂದಿರುವ ಬಗ್ಗೆ ಅಧಿಕೃತ ಮಾಹಿತಿ ಬಂದಿಲ್ಲ. ನಿಖರವಾಗಿ ಮಾಹಿತಿ ಪಡೆಯಲಾಗುವುದು. ಆದರೆ, ಗಾಬರಿಯಾಗುವಂತಹ ವರದಿಯೇನೂ ಬಂದಿಲ್ಲ. ಇದನ್ನು ದೊಡ್ಡದು ಮಾಡಿ ಗಾಬರಿಪಡಿಸುವುದು ಬೇಡ ಎಂದು ಅವರು ಮನವಿ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News