ಸಚಿವ ಸ್ಥಾನ ನೀಡಿದರೆ ಬಿಜೆಪಿಗೆ ಸೇರುತ್ತೇನೆ ಎಂದ ಶಾಸಕ ಎನ್.ಮಹೇಶ್
Update: 2021-01-05 23:04 IST
ಚಾಮರಾಜನಗರ, ಜ.5: ಸಚಿವ ಸ್ಥಾನ ನೀಡಿದರೆ ಬಿಜೆಪಿಗೆ ಸೇರುವುದು ಖಂಡಿತ ಎಂದು ಉಚ್ಚಾಟಿತ ಬಿಎಸ್‌ಪಿ ಶಾಸಕ ಎನ್.ಮಹೇಶ್ ಅವರು ಹೇಳಿದ್ದಾರೆ.
ಬಿಳಿಗಿರಿರಂಗನಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸೇರ್ಪಡೆ ಬಗ್ಗೆ ನಾನು ಇನ್ನೂ ನಿರ್ಧಾರ ಕೈಗೊಂಡಿಲ್ಲ. ಸಂಕ್ರಾಂತಿ ಕಳೆಯಲಿ. ನಂತರ ನೋಡೋಣ ಎಂದು ತಿಳಿಸಿದರು.
ಒಂದು ಸ್ಥಾನಮಾನ ಸಿಕ್ಕರೆ ಕ್ಷೇತ್ರ ಹಾಗೂ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಬಿಜೆಪಿ ಸೇರ್ಪಡೆ ಬಗ್ಗೆ ನಿರ್ಧಾರ ಕೈಗೊಳ್ಳಬಹುದು ಎಂಬ ಅಪೇಕ್ಷೆಯನ್ನು ನನ್ನ ಬೆಂಬಲಿಗರು ಹಾಗೂ ಕಾರ್ಯಕರ್ತರು ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಬಿಜೆಪಿ ನಾಯಕರೊಂದಿಗೆ ಮಾತುಕತೆ ನಡೆದಿಲ್ಲ ಎಂದು ಅವರು ತಿಳಿಸಿದರು.