ಪಡಿತರ ಚೀಟಿಗಳ ಇ-ಕೆವೈಸಿ ಪುನರಾರಂಭ

Update: 2021-01-05 18:57 GMT

ಬೆಂಗಳೂರು, ಜ. 5: ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿದ್ದ ಪಡಿತರ ಚೀಟಿದಾರರ ಮಾಹಿತಿಯನ್ನು ಉನ್ನತೀಕರಿಸುವ ಇ-ಕೆವೈಸಿ ಕಾರ್ಯಕ್ರಮವನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ ಜ.1ರಿಂದ ಪುನರಾರಂಭಿಸಲಾಗಿದೆ.

ಈ ಹಿಂದೆ ಪಡಿತರ ಚೀಟಿದಾರರ ನ್ಯಾಯಬೆಲೆ ಅಂಗಡಿಗಳ ಮೂಲಕ ಇ-ಕೆವೈಸಿ ಕಾರ್ಯಕ್ರಮವನ್ನು 2019 ಜೂನ್‍ನಿಂದ 2020 ಫೆಬ್ರವರಿಯವರೆಗೆ ನಡೆಸಲಾಗಿತ್ತು. ಈ ಬಾರಿ ಆಹಾರ ಇಲಾಖೆಯ ಆಯುಕ್ತರ ಆದೇಶದ ಅನ್ವಯ ಅಂತ್ಯೋದಯ ಅನ್ನ ಯೋಜನೆ ಮತ್ತು ಅರ್ಹತಾ ಕುಟುಂಬ ಪಡಿತರ ಚೀಟಿಗಳ ಇ-ಕೆವೈಸಿ ಸಂಗ್ರಹಿಸುವ ಕಾರ್ಯವನ್ನು ಜ.1ರಿಂದ ಪುನರಾರಂಭಿಸಲಾಗಿದೆ.

ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಬೆಂಗಳೂರು ಪಶ್ಚಿಮ ವಲಯದ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News