ಬೀದರ್: ತಾಯಿ ಮತ್ತು ಮಕ್ಕಳ ಆರೈಕೆ ಆಸ್ಪತ್ರೆ ಉದ್ಘಾಟಿಸಿದ ಸಿಎಂ ಯಡಿಯೂರಪ್ಪ

Update: 2021-01-06 06:50 GMT

ಬೀದರ್ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ 100 ಹಾಸಿಗೆಗಳ ಸೌಲಭ್ಯಯುಳ್ಳ ತಾಯಿ ಮತ್ತು ಮಕ್ಕಳ ಆರೈಕೆ ಆಸ್ಪತ್ರೆ ಮತ್ತು ಇನ್ನಿತರ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನೆರವೇರಿಸಿದರು.

20ಕೋಟಿ ರೂ. ವೆಚ್ಚದ 100 ಬೆಡ್ ನ ಆಸ್ಪತ್ರೆ, ಬೀದರ್ ಇಂಜಿನಿಯರಿಂಗ್ ಕಾಲೇಜು ಹಾಸ್ಟೆಲ್, ಬೀದರ್ ಸರ್ಕಾರಿ ಶೂಶುಷ್ರ ಶಾಲೆ, ಕಾಲೇಜು ಕಟ್ಟಡ ಹಾಗೂ ವಿದ್ಯಾರ್ಥಿಗಳಿಗ ವಸತಿ ನಿಲಯ ನಿರ್ಮಾಣ, ಗ್ರಾಮೀಣ  ಸಂತೆಗಳ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆಗೈದರು.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ ಸಚಿವ ಲಕ್ಷ್ಮಣ್ ಸವದಿ, ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಬಿ. ಚವ್ಹಾಣ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಡಾ. ಕೆ. ಸುಧಾಕರ್, ಸಂಸದ ಭಗವಂತ ಖೂಬಾ, ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಇನ್ನಿತರರು  ಹಾಜರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News