ರೂರ್ಕೆಲಾ ಸ್ಟೀಲ್ ಪ್ಲಾಂಟ್ ನಲ್ಲಿ ವಿಷಾನಿಲ ಸೋರಿಕೆ: ನಾಲ್ವರು ಗುತ್ತಿಗೆ ಕಾರ್ಮಿಕರು ಮೃತ್ಯು

Update: 2021-01-06 16:22 GMT

ರೂರ್ಕೇಲಾ,ಜ.6: ಸರಕಾರಿ ಸ್ವಾಮ್ಯದ ಭಾರತೀಯ ಉಕ್ಕು ಪ್ರಾಧಿಕಾರ (ಸೇಲ್)ದ ಒಡೆತನದಲ್ಲಿರುವ ಇಲ್ಲಿಯ ರೂರ್ಕೇಲಾ ಉಕ್ಕಿನ ಕಾರ್ಖಾನೆಯಲ್ಲಿ ಬುಧವಾರ ವಿಷಾನಿಲ ಸೋರಿಕೆಯ ಪರಿಣಾಮ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದು,ಹಲವರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಳಿಗ್ಗೆ ಕಾರ್ಖಾನೆಯ ಕೋಲ್ ಕೆಮಿಕಲ್ ವಿಭಾಗದಲ್ಲಿ ಈ ಅವಘಡ ಸಂಭವಿಸಿದಾಗ 10 ಕಾರ್ಮಿಕರು ಕರ್ತವ್ಯನಿರತರಾಗಿದ್ದರು.

ಕಾರ್ಬನ್ ಮೊನೊಕ್ಸೈಡ್ ಸೇವನೆಯಿಂದ ಕಾರ್ಮಿಕರ ಸಾವುಗಳು ಸಂಭವಿಸಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಅಧಿಕಾರಿಗಳು ತಿಳಿಸಿದರು.

ತೀವ್ರ ಅಸ್ವಸ್ಥಗೊಂಡಿದ್ದ ನಾಲ್ವರು ಕಾರ್ಮಿಕರನ್ನು ಇಸ್ಪಾತ್ ಜನರಲ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅಸ್ವಸ್ಥಗೊಂಡವರಿಗೆ ಕಾರ್ಖಾನೆಯ ಡಿಸ್ಪೆನ್ಸರಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕಾರ್ಖಾನೆಯ ಅಧಿಕಾರಿಗಳು ಈ ಅವಘಡದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News