ಜಿ.ಪಂ. ಸದಸ್ಯನ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

Update: 2021-01-06 13:43 GMT

ಧಾರವಾಡ, ಜ.6: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮತ್ತೆ ಒಂದು ವಾರ ಮುಂದೂಡಿಕೆ ಮಾಡಿದೆ.

ಜಾಮೀನು ಅರ್ಜಿ ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್ ನ್ಯಾಯಪೀಠ, ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಿತು.

ಸಿಬಿಐ ಪರ ವಕೀಲರು ಬುಧವಾರ ವಿನಯ್ ಕುಲಕರ್ಣಿ ಜಾಮೀನು ಅರ್ಜಿಗೆ ತಕರಾರು ಅರ್ಜಿ ಸಲ್ಲಿಸಿದರು. ನ್ಯಾಯಪೀಠವು ಅರ್ಜಿ ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಿತು.

ಈಗಾಗಲೇ ವಿನಯ ಕುಲಕರ್ಣಿ ಕಳೆದ ಎರಡು ತಿಂಗಳಿನಿಂದ ಬೆಳಗಾವಿ ಹಿಂಡಲಗಾ ಜೈಲಿನಲ್ಲಿದ್ದಾರೆ. ಧಾರವಾಡದ ಸಿಬಿಐ ವಿಶೇಷ ಕೋರ್ಟ್‍ನಲ್ಲಿ ವಿನಯ ಕುಲಕರ್ಣಿ ಜಾಮೀನು ಅರ್ಜಿ ತಿರಸ್ಕಾರಗೊಂಡಿತ್ತು. ಆ ಹಿನ್ನೆಲೆಯಲ್ಲಿ ವಿನಯ ಪರ ವಕೀಲರು ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News