ಮೇ 2ನೇ ವಾರದಲ್ಲಿ ದ್ವಿತೀಯ ಪಿಯು, ಜೂನ್ ಮೊದಲ ವಾರದಲ್ಲಿ ಎಸೆಸೆಲ್ಸಿ ಪರೀಕ್ಷೆ: ಸಚಿವ ಸುರೇಶ್ ಕುಮಾರ್

Update: 2021-01-06 13:52 GMT

ಬೆಂಗಳೂರು, ಜ.6: ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಪರೀಕ್ಷೆಗಳು ನಡೆಯಲಿದ್ದು, ಎಸೆಸೆಲ್ಸಿ ಪರೀಕ್ಷೆಗಳು ಜೂನ್ ಮೊದಲ ವಾರದಿಂದ ಪ್ರಾರಂಭವಾಗಲಿವೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ. 

ಶಿಕ್ಷಣ ಇಲಾಖೆಯು ಈ ತರಗತಿಗಳಿಗೆ ಸಂಬಂಧಿಸಿದಂತೆ ಪರೀಕ್ಷಾ ದೃಷ್ಟಿಯಿಂದ ಬೋಧನೆ, ಕಲಿಕೆಗಾಗಿ ಗುರುತಿಸಿರುವ ವಿಷಯಾಂಶಗಳನ್ನು ಅಂತಿಮಗೊಳಿಸಿದ್ದು, ಇದರ ವಿವರಗಳನ್ನು ಎಲ್ಲ ಶಾಲೆಗಳಿಗೆ ತಲುಪಿಸಲಾಗುತ್ತದೆ. ಯಾವುದೇ ವಿದ್ಯಾರ್ಥಿಗೂ ಹೊರೆಯಾಗದ ರೀತಿಯಲ್ಲಿ ಕನಿಷ್ಠ ಕಲಿಕೆಗೆ ಬೋಧಿಸಬೇಕಿರುವ ಪಠ್ಯಗಳನ್ನು ಪರಿಗಣಿಸಲಾಗಿದೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. 

ಒಂದರಿಂದ ಒಂಬತ್ತಕ್ಕೆ ಪಠ್ಯ ಕಡಿತವಿಲ್ಲ: ಈ ಕುರಿತಂತೆ ಪರ್ಯಾಯ ಶೈಕ್ಷಣಿಕ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಈ ತರಗತಿಗಳಿಗೆ ಸಂಬಂಧಿಸಿದಂತೆ ಪಠ್ಯ‌ಕಡಿತವೆನ್ನುವ ಪ್ರಸ್ತಾಪ ಇಲಾಖೆಯ ಮುಂದಿಲ್ಲ. ಶಾಲಾ ಹಂತದಲ್ಲಿ ಮೌಲ್ಯ ಮೌಲ್ಯಮಾಪನವನ್ನ ನಡೆಸಲಾಗುವುದರಿಂದ ಮಕ್ಕಳ ಕಲಿಕಾ ಸಾಮರ್ಥ್ಯ ಆಧಾರದಲ್ಲಿ ಸರಳ ಮೌಲ್ಯಮಾಪನಾ ಪ್ರಕ್ರಿಯೆ ಜಾರಿಯಲ್ಲಿರಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News