‘ದ್ವಿತೀಯ- 2021’ ಅತಿಥಿ ಉಪನ್ಯಾಸ ಕಾರ್ಯಕ್ರಮ
ಉಡುಪಿ, ಜ.6: ಕುತ್ಪಾಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯು ರ್ವೇದ ಕಾಲೇಜಿನ ಅಗದತಂತ್ರ ಸ್ನಾತಕೋತ್ತರ ವಿಭಾಗದ ವತಿಯಿಂದ ‘ದ್ವಿತೀಯ- 2021’ ಎಂಬ ಅತಿಥಿ ಉಪನ್ಯಾಸ ಕಾರ್ಯಕ್ರಮವು ಜ.5ರಂದು ಕಾಲೇಜಿನ ಭಾವಪ್ರಕಾಶ ಸಭಾಂಗಣದಲ್ಲಿ ಜರಗಿತು.
ಮುಖ್ಯ ಅತಿಥಿಯಾಗಿ ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ಡಿಪಾರ್ಟ್‌ಮೆಂಟ್ ಆಪ್ ಫೊರೆನ್ಸಿಕ್ ಸೈಯನ್ಸ್ ಅಂಡ್ ಟೊಕ್ಸಿಕಾಲಜಿಯ ಸಹಾಯಕ ಪ್ರಾಧ್ಯಾಪಕ ಡಾ.ನಿರ್ಮಲ್ ಕೃಷ್ಣನ್ ಎಂ. ‘ಎನ್ ಇನ್ಸೈಟ್ ಟು ಸಬ್ಸ್‌ಟೆನ್ಸ್ ಅಬ್ಯುಸ್’ ಎಂಬ ವಿಷಯದ ಮೇಲೆ ಉಪನ್ಯಾಸ ನೀಡಿದರು.
ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಸುಚೇತಾ ಕುಮಾರಿ ಅಧ್ಯಕ್ಷತೆ ವಹಿಸಿ ದ್ದರು. ಡಾ.ನಿರ್ಮಲ್ ಕೃಷ್ಣನ್ ಅವರನ್ನು ಸನ್ಮಾನಿಸಲಾಯಿತು. ಪ್ರಾಧ್ಯಾಪಕ ಡಾ.ಶ್ರೀನಿಧಿ ಆರ್., ಡಾ.ನೀರಜ್ ಎ.ಕೆ., ಸ್ನಾತಕೋತ್ತರ ವಿದ್ಯಾರ್ಥಿನಿ ಡಾ. ರೇವತಿ ವಿ. ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದರು.
ಸ್ನಾತಕೋತ್ತರ ವಿದ್ಯಾರ್ಥಿನಿ ಡಾ.ಅನನ್ಯ ಬಿ. ಕಾರ್ಯಕ್ರಮ ನಿರೂಪಿಸಿದರು. ಕೆ.ಎಂ.ಸಿ.ಯ ಡಾ.ಅಂಕುರ್ ಚೌಧರಿ, ಡಾ.ರಾಜಲಕ್ಷ್ಮೀ, ಡಾ.ಚೈತ್ರಾ ಹೆಬ್ಬಾರ್, ಡಾ.ರವಿಕೃಷ್ಣ ಎಸ್., ಡಾ.ಶ್ರೀಜಿತ್ ಕೆ., ಡಾ.ಧನೇಶ್ವರಿ, ಡಾ.ಸರಿತಾ, ಡಾ. ಇನೋಶ್, ಡಾ.ರೇಖಾ ಪಾಟಿಲ್ ಮೊದಲಾದವರು ಉಪಸ್ಥಿತರಿದ್ದರು.