ದ.ಕ. ಜಿಲ್ಲೆ : 42 ಮಂದಿಯಲ್ಲಿ ಕೊರೋನ ಪಾಸಿಟಿವ್
Update: 2021-01-06 20:43 IST
ಮಂಗಳೂರು, ಜ.6: ದ.ಕ. ಜಿಲ್ಲೆಯಲ್ಲಿ ಬುಧವಾರ 42 ಮಂದಿಗೆ ಕೊರೋನ ಸೋಂಕು ತಗುಲಿದ್ದು, 22 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿನ 33,080 ಸೋಂಕಿತರ ಪೈಕಿ 31,953 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ಗೆ 732 ಮಂದಿ ಮೃತಪಟ್ಟಿದ್ದು, 395 ಸಕ್ರಿಯ ಪ್ರಕರಣಗಳಿವೆ.
ಜಿಲ್ಲೆಯಲ್ಲಿ ಒಟ್ಟು 20,634 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ವರದಿಯಾಗಿದ್ದು, 21,92,704 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.