×
Ad

ದ.ಕ. ಜಿಲ್ಲೆಯಲ್ಲಿ ಹಕ್ಕಿಜ್ವರ ಲಕ್ಷಣ ಇಲ್ಲ- ಡಿಎಚ್‌ಒ ಸ್ಪಷ್ಟಣೆ

Update: 2021-01-06 22:07 IST

ಮಂಗಳೂರು, ಜ.6: ದ.ಕ. ಜಿಲ್ಲೆಯಲ್ಲಿ ಹಕ್ಕಿ ಜ್ವರದ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯಾರಿ ಸ್ಪಷ್ಟಪಡಿಸಿದ್ದಾರೆ.

ಮಂಗಳೂರು ತಾಲೂಕಿನ ಮಂಜನಾಡಿಯ ಅರಂಗಡಿ ಪ್ರದೇಶದಲ್ಲಿ ಮಂಗಳವಾರ ಐದು ಕಾಗೆಗಳು ಸತ್ತು ಬಿದ್ದಿದ್ದವು. ಕಾಗೆಯೊಂದರ ಕಳೇಬರ ವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದ್ದು, ಉಳಿದ ಕಾಗೆಗಳ ಕಳೇಬರವನ್ನು ಗುಂಡುತೋಡಿ ಹೂಳಲು ನಿರ್ದೇಶಿಸಲಾಗಿದೆ. ಸುತ್ತಲಿನ ಪ್ರದೇಶಕ್ಕೆ ಕೀಟನಾಶಕ ಸಿಂಪಡಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಮಂಜನಾಡಿ ಗ್ರಾಮದಲ್ಲಿ 10,401 ಜನಸಂಖ್ಯೆ ಇದ್ದು, ಈಗಾಗಲೇ ಆಶಾ ಕಾರ್ಯಕರ್ತೆಯರು ಹಾಗೂ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರಿಂದ ಮನೆ ಮನೆ ಸಮೀಕ್ಷೆ ನಡೆಸಲಾಗಿದೆ. ಇದುವರೆಗೂ ಯಾವುದೇ ರೋಗ ಲಕ್ಷಣ ಕಂಡುಬಂದಿಲ್ಲ. ಕರಪತ್ರಗಳ ಮೂಲಕ ಆರೋಗ್ಯ ಶಿಕ್ಷಣವನ್ನು ನೀಡುವ ಕ್ರಮ ಕೈಗೊಳ್ಳಲಾಗಿದೆ. ವೈದ್ಯಾಧಿಕಾರಿಗಳ ತಂಡವನ್ನು ಪ್ರತಿನಿತ್ಯ ಸ್ಥಳಕ್ಕೆ ಭೇಟಿ ಕೊಟ್ಟದ್ದನ್ನು ಮಾಹಿತಿ ನೀಡಲು ಆರೋಗ್ಯ ಇಲಾಖೆ ಸಿಬ್ಬಂದಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News