ಹಿಂದೂ ದೇವತೆಗಳ ಅವಹೇಳನ ಆರೋಪ: ಕಾಮಿಡಿಯನ್‌ ಫಾರೂಕಿಗೆ ಜಾಮೀನು ನಿರಾಕರಣೆ

Update: 2021-01-06 17:02 GMT

ಭೋಪಾಲ್, ಜ.7: ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದ್ದ ಕಾರ್ಯಕ್ರಮದ ಸಂದರ್ಭ ಹಿಂದೂ ದೇವತೆಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದಡಿ ಬಂಧಿಸಲ್ಪಟ್ಟಿರುವ ಕಾಮಿಡಿಯನ್ ಮುನಾವರ್ ಫಾರೂಕಿ ಹಾಗೂ ಮತ್ತೊಬ್ಬ ವ್ಯಕ್ತಿಗೆ ಇಂದೋರ್ ನ್ಯಾಯಾಲಯ ಜಾಮೀನು ನಿರಾಕರಿಸಿದೆ.

ಎರಡೂ ಕಡೆಯವರ ವಾದವನ್ನು ಆಲಿಸಿದ ಬಳಿಕ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರು ಫಾರೂಕಿ ಹಾಗೂ ನಳಿನ್ ಯಾದವ್‌ಗೆ ಜಾಮೀನು ನಿರಾಕರಿಸಿದರು. ಜನವರಿ 2ರಂದು ಮುಖ್ಯ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಇಂದೋರ್‌ನ ಹೋಟೆಲ್‌ನಲ್ಲಿ ಜನವರಿ 1ರಂದು ಹೊಸವರ್ಷದ ಸಂಭ್ರಮಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಪ್ರೇಕ್ಷಕರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕ ಹಾಗೂ ಬಾಲಕಿಯರು ಇದ್ದರೂ ಫಾರೂಕಿ ಹಾಗೂ ಯಾದವ್ ಹಿಂದೂ ದೇವತೆಗಳ ಬಗ್ಗೆ ಅಸಭ್ಯ, ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿ ನಾಯಕಿಯ ಪುತ್ರ ನೀಡಿದ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News