ಭಾರತ - ಆಸ್ಟ್ರೇಲಿಯಾ ನಡುವಿನ ಸಿಡ್ನಿ ಟೆಸ್ಟ್‌ಗೆ ಮಳೆ ಕಾಟ

Update: 2021-01-07 03:51 GMT

ಸಿಡ್ನಿ: ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಸಿಡ್ನಿಯಲ್ಲಿ ನಡೆಯುತ್ತಿರುವ ಮೂರನೇ ಕ್ರಿಕೆಟ್ ಟೆಸ್ಟ್ ಪಂದ್ಯ ಮಳೆಯಿಂದ ಬಾಧಿತವಾಗಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಅತಿಥೇಯ ತಂಡ ಒಂದು ವಿಕೆಟ್ ನಷ್ಟಕ್ಕೆ 21 ರನ್ ಗಳಿಸಿದ್ದಾಗ ಭಾರಿ ಮಳೆ ಬಿದ್ದು ಆಟ ಮುಂದೂಡಲಾಗಿದೆ.

ನಾಲ್ಕು ಟೆಸ್ಟ್‌ಗಳ ಸರಣಿಯ ಮೊದಲ ಎರಡು ಪಂದ್ಯಗಳನ್ನು ಕ್ರಮವಾಗಿ ಆಸ್ಟ್ರೇಲಿಯಾ ಮತ್ತು ಭಾರತ ಗೆದ್ದಿದ್ದು, 1-1 ಸಮಬಲ ಸಾಧಿಸಿವೆ. ಸಿಡ್ನಿ ಟೆಸ್ಟ್‌ನ ನಾಲ್ಕನೇ ಓವರ್‌ನಲ್ಲಿ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ 5 ರನ್ ಗಳಿಸಿದ್ದಾಗ ಮುಹಮ್ಮದ್ ಸಿರಾಜ್ ಬೌಲಿಂಗ್‌ನಲ್ಲಿ ಚೇತೇಶ್ವರ ಪೂಜಾರಗೆ ಕ್ಯಾಚ್ ಕೊಟ್ಟು ವಿಕೆಟ್ ಒಪ್ಪಿಸಿದರು.

ವಿಲ್ ಪುಕೊಸ್ಕಿ (14) ಮತ್ತು ಮರ್ನಸ್ ಲೆಬುಶೆಂಜ್ (2) ಆಸ್ಟ್ರೇಲಿಯಾ ಇನಿಂಗ್ಸ್ ಕಟ್ಟುವ ಪ್ರಯತ್ನದಲ್ಲಿದ್ದಾಗ ಭಾರಿ ಮಳೆ ಬಿದ್ದು, ಮುಂಚಿತವಾಗಿಯೇ ಭೋಜನ ವಿರಾಮ ಘೋಷಿಸಲಾಯಿತು.

ಅಜಿಂಕ್ಯ ರಹಾನೆ ನೇತೃತ್ವದ ಭಾರತ ತಂಡಕ್ಕೆ ರೋಹಿತ್ ಶರ್ಮಾ ಮತ್ತು ನವದೀಪ್ ಸೈನಿ ಸೇರಿಕೊಂಡಿದ್ದು, ಸೈನಿ ಚೊಚ್ಚಲ ಟೆಸ್ಟ್ ಆಡುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News