ದ.ಕ., ಉಡುಪಿ ಜಿಲ್ಲೆಯಲ್ಲಿ 15 ದಿನಗಳ ಒಳಗೆ ಮರಳು ತೆಗೆಯಲು ಸೂಕ್ತ ಕ್ರಮ: ಸಚಿವ ಸಿ.ಸಿ.ಪಾಟೀಲ್
ಮಂಗಳೂರು : ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ 15 ದಿನಗಳ ಒಳಗೆ ಮರಳು ತೆಗೆಯಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಖಾತೆಯ ಸಚಿವ ಸಿ.ಸಿ.ಪಾಟೀಲ್ ಸುದ್ದಿಗೋಷ್ಢಿಯಲ್ಲಿಂದು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಗುರುತಿಸಲಾದ 30 ಬ್ಲಾಕ್ ಗಳಲ್ಲಿ ಮರಳು ತೆಗೆಯಲು ಅನುಮತಿ ನೀಡಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಸಿಆರ್ ಝಡ್ ಪ್ರದೇಶದಲ್ಲಿ 104 ಕುಟುಂಬಗಳಿಗೆ ಮರಳು ತೆಗೆಯಲು ಅನುಮತಿ ನೀಡಲಾಗಿದೆ. ಈ ಪ್ರದೇಶದಲ್ಲಿ ಇನ್ನು ಕೆಲವರ ಅರ್ಜಿಯನ್ನು ಪರಿಗಣಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಸರಕಾರಿ ಪ್ರದೇಶದಲ್ಲಿ ಅಕ್ರಮವಾಗಿ ಕೆಂಪು ಕಲ್ಲು ತೆಗೆಯಲು ಮತ್ತು ಮಣ್ಣು ಸಾಗಾಟದ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಖಾಸಗಿ ಜಾಗದಲ್ಲಿ ಕೆಂಪು ಕಲ್ಲು ತೆಗೆಯಲು 250. ಮಂದಿ ಅರ್ಜಿ ಸಲ್ಲಿಸಿದ್ದಾರೆ.ಈ ಅರ್ಜಿದಾರರಿಗೆ ಅನುಮತಿ ನೀಡಲು ಕ್ರಮ ಕೈವಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಅಂತರರಾಜ್ಯ ಅಕ್ರಮ ಮರಳು ಸಾಗಾಟ ತಡೆಗೆ ಕ್ರಮ ಕೈ ಗೊಳ್ಳಲಾಗುವುದು. ಗಡಿ ಪ್ರದೇಶದಲ್ಲಿ ಅಕ್ರಮ ಮರಳು ಸಾಗಾಟ ತಡೆಗೆ 196 ಸಿ.ಸಿ.ಕ್ಯಾಮರಾ ಅಳವಡಿಸಲು ಸೂಚಿಸಲಾಗಿದೆ. ಸುದ್ದಿ ಗೋಷ್ಠಿಯಲ್ಲಿ ಸಂಸದ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಉಡುಪಿ ಜಿಲ್ಲಾಧಿಕಾರಿ ಡಾ.ಜಗದೀಶ್ , ದ.ಕ ಜಿಲ್ಲಾ ಪೊಲೀಸ್ ವರಿಷ್ಢಾಧಿಕಾರಿ ಲಕ್ಷ್ಮೀ ಪ್ರಸಾದ್ ,ಉಡುಪಿ ಜಿಲ್ಲಾ ಪೊಲೀಸ್ ವರಿಷ್ಢಾಧಿಕಾರಿ ವಿಷ್ಣುವರ್ಧನ್, ಶಾಸಕ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ರಾಜೇಶ್ ನಾಯ್ಕ್ ಮೊದಲಾದ ವರು ಉಪಸ್ಥಿತರಿದ್ದರು.