×
Ad

ವಿವಿಧ ರಾಜ್ಯಗಳಿಗೆ ಚುನಾವಣೆ ವೀಕ್ಷಕರನ್ನು ನೇಮಿಸಿದ ಕಾಂಗ್ರೆಸ್: ಪ.ಬಂಗಾಳದ ಹೊಣೆ ಬಿ.ಕೆ.ಹರಿಪ್ರಸಾದ್ ಹೆಗಲಿಗೆ

Update: 2021-01-07 17:30 IST

ಬೆಂಗಳೂರು, ಜ.7: 2021ರಲ್ಲಿ ನಡೆಯಲಿರುವ ಕೇರಳ, ತಮಿಳುನಾಡು, ಪುದುಚೇರಿ, ಅಸ್ಸಾಂ ಹಾಗೂ ಪಶ್ಚಿಮ ಬಂಗಾಳ ರಾಜ್ಯ ವಿಧಾನಸಭಾ ಚುನಾವಣೆ ಎದುರಿಸಲು ಕಾಂಗ್ರೆಸ್ ಸಜ್ಜಾಗಿದ್ದು, ಕರ್ನಾಟಕದ ಮೂವರು ಹಿರಿಯ ನಾಯಕರನ್ನೊಳಗೊಂಡಂತೆ ವಿವಿಧ ರಾಜ್ಯಗಳಿಗೆ ಚುನಾವಣೆ ವೀಕ್ಷಕರನ್ನು ನೇಮಿಸಿದೆ.

ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ, ಮಾಜಿ ಡಾ.ಜಿ.ಪರಮೇಶ್ವರ್, ಕಾಂಗ್ರೆಸ್ ಹಿರಿಯ ಮುಖಂಡರಾದ ಬಿ.ಕೆ ಹರಿಪ್ರಸಾದ್ ಅವರಿಗೆ ಮಹತ್ವದ ಹೊಣೆ ನೀಡಲಾಗಿದೆ.

ತಮಿಳುನಾಡು ಹಾಗೂ ಪುದುಚೇರಿ ರಾಜ್ಯದ ಚುನಾವಣೆ ವೀಕ್ಷಕರನ್ನಾಗಿ ವೀರಪ್ಪ ಮೊಯ್ಲಿ, ಕೇರಳದ ವೀಕ್ಷಕರನ್ನಾಗಿ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹಾಗೂ ಪಶ್ಚಿಮ ಬಂಗಾಳದ ವೀಕ್ಷಕರಾಗಿ ಬಿ.ಕೆ.ಹರಿಪ್ರಸಾದ್ ಅವರನ್ನು ನೇಮಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News